ವಾಹನ ಸವಾರರ ಗಮನಕ್ಕೆ : ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ, ಇಲ್ಲದಿದ್ರೆ 2 ಸಾವಿರ ದಂಡ

WhatsApp Group Join Now
Telegram Group Join Now

ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

 

ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

2019 ಏಪ್ರಿಲ್ 1ಕ್ಕಿಂತ ಹಳೆಯದಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-HSRP ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆ.17ಕ್ಕೆ ಮುಕ್ತಾಯವಾಗಲಿದೆ. ನಂಬರ್ ಪ್ಲೆಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಇಲಾಖೆ ಮುಂದಾಗಿದೆ.ವಾಹನಗಳಿಗೆ ಹೆಚ್ ಎಸ್ ಆರ್ ಪಿ ಅಳವಡಿಸದೇ ಮೊದಲ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿ ದಂಡ, 2ನೇ ಬಾರಿ ಸಿಕ್ಕಿ ಬಿದ್ದರೆ 2000 ರೂಪಾಯಿ ದಂಡ ಹಾಕಲಾಗುತ್ತದೆ.

ಹಳೆಯ ವಾಹನಗಳಿಗೆ HSRP ಅಳವಡಿಕೆಯ ಕಾರ್ಯವಿಧಾನ

https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.

ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.

HSRP ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.

ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

WhatsApp Group Join Now
Telegram Group Join Now
Back to top button