Month: July 2024

  • State Newsವರ್ಷದ ಆರಂಭದಲ್ಲೇ ಕೋಡಿ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಯ್ತಾ?

    ವರ್ಷದ ಆರಂಭದಲ್ಲೇ ಕೋಡಿ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಯ್ತಾ?

    ಬೆಳಗಾವಿ : ರಾಜ್ಯದಲ್ಲಿ ಭೀಕರ ಮಳೆ ಯಾಗುತ್ತಿದ್ದು ಅಪಾರ ಪ್ರಮಾಣದ ಮಳೆಯಿಂದ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿವೆ.ಇದೀಗ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ.   ಹೌದು ರಾಜ್ಯದಲ್ಲಿ ಯಾವಾಗ ಮುಂಗಾರು ಮಳೆ ಆರಂಭವಾಯಿತೊ ಅಂದಿನಿಂದ ಇವತ್ತಿನವರೆಗೂ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಪ್ರಮಾಣದ ಮಳೆಯಿಂದ ಅನೇಕ ಜನರ ಸಾವು ನೋವಾಗಿದೆ.ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಗುಡ್ಡ…

    Read More »
  • Local Newsಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆ

    ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆ

    ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನ ಉಳಿದೆಡೆ ಸಾಧಾರಣ ಮಳೆಯಾಗಿದೆ. ಕಂದಾಯ ಇಲಾಖೆಯಂತೆ ಕಣಕುಂಬಿ ಅರಣ್ಯದಲ್ಲಿ 11.5 ಸೆಂ.ಮೀ, ಲೋಂಡಾ-9 ಸೆಂ.ಮೀ, ಜಾಂಬೋಟಿ ಸುತ್ತಮುತ್ತ 6.2 ಸೆಂ.ಮೀ ಮತ್ತು ಉಳಿದೆಡೆ ಸರಾಸರಿ 5 ಸೆಂ.ಮೀ ಮಳೆ ಸುರಿದಿದೆ.   ಪಟ್ಟಣದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ತಾಲ್ಲೂಕಿನ ನಂದಗಡ, ಹಲಸಿ ಭಾಗದಲ್ಲಿ ಸಂಜೆ ತುಂತುರು ಮಳೆಯಾಗಿದೆ. ಎರಡು ದಿನಗಳಿಂದ ಮಳೆಯ ಅಬ್ಬರ ಕ್ಷೀಣಿಸಿದ್ದು, ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ.…

    Read More »
  • Local Newsಬೆಳಗಾವಿ- ಮಿರಜ್ ವಿಶೇಷ ಪ್ಯಾಸೆಂಜರ್ ರೈಲು ಸಂಚಾರ

    ಬೆಳಗಾವಿ- ಮಿರಜ್ ವಿಶೇಷ ಪ್ಯಾಸೆಂಜರ್ ರೈಲು ಸಂಚಾರ

    ಬೆಳಗಾವಿ :ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಿಗೆ ತೀವ್ರ ಹಾನಿಯಾಗಿದ್ದು ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಳಗಾವಿ – ಮೀರಜ್ ನಡುವೆ ವಿಶೇಷ ಪ್ಯಾಸೆಂಜ‌ರ್ ರೈಲು ಓಡಿಸಲಾಗುತ್ತಿದೆ. ಬೆಳಗಾವಿ – ಮೀರಜ್ ರೈಲು : ಪ್ರತಿದಿನ ಬೆಳಿಗ್ಗೆ 6.10ಕ್ಕೆ ಹೊರಟು 9.10ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50ಕ್ಕೆ ಮೀರಜ್‌ನಿಂದ ಹೊರಟು ಮಧ್ಯಾಹ್ನ 12.50ಕ್ಕೆ ಬೆಳಗಾವಿ ತಲುಪುತ್ತದೆ.ಬೆಳಗಾವಿ-ಮೀರಜ್ ರೈಲು : ಮಧ್ಯಾಹ್ನ 1.30ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.358…

    Read More »
  • Local Newsಗೋಕಾಕ‌ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ; ಊಟೋಪಹಾರ ವ್ಯವಸ್ಥೆ ಪರಿಶೀಲನೆ- ಸಂತ್ರಸ್ತರೊಂದಿಗೆ ಸಮಾಲೋಚನೆ

    ಗೋಕಾಕ‌ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ; ಊಟೋಪಹಾರ ವ್ಯವಸ್ಥೆ ಪರಿಶೀಲನೆ- ಸಂತ್ರಸ್ತರೊಂದಿಗೆ ಸಮಾಲೋಚನೆ

    ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತ ಕುಟುಂಬಗಳಿಗಾಗಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾನುವಾರ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣವೇ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವು ಒದಗಿಸಲಾಗುತ್ತಿದೆ. ಸಂತ್ರಸ್ತರಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಸಮರ್ಪಕ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಹಶೀಲ್ದಾರ ಹಾಗೂ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾಧಿಕಾರಿ ರೋಷನ್ ಸೂಚನೆ ನೀಡಿದರು. ಗೋಕಾಕ‌ ಕಾಳಜಿ ಕೇಂದ್ರಕ್ಕೆ ಡಿಸಿ…

    Read More »
  • Local Newsಬೆಳಗಾವಿಯಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ,

    ಬೆಳಗಾವಿಯಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ,

    ಬೆಳಗಾವಿ, ಜುಲೈ 28: ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದ ಜನರು ಅತಂತ್ರವಾಗಿದ್ದಾರೆ. ಘಟಪ್ರಭಾ ನದಿ (Ghataprabha River) ಸೃಷ್ಟಿಸಿರುವ ಅವಾಂತರಕ್ಕೆ ಈಗ ಜನ ತತ್ತರಿಸಿ ಹೋಗಿದ್ದಾರೆ. ತನ್ನ ಪಾತ್ರವನ್ನ ಬಿಟ್ಟು ಹರಿಯುತ್ತಿರುವ ನದಿ ಊರಿಗೆ ಊರನ್ನೇ ತನ್ನ ಒಡಲಿಗೆ ಹಾಕಿಕೊಂಡಿದೆ. ಸೇತುವೆ, ದೇವಸ್ಥಾನ, ಬ್ಯಾಂಕ್ ಮತ್ತು ಮನೆಗಳು ಹೀಗೆ ಎಲ್ಲವೂ ಜಲಾವೃತವಾಗಿವೆ. ಪ್ರವಾಹದಿಂದ ಬಿದಿಗೆ ಬಿದ್ದ 1 ಸಾವಿರಕ್ಕೂ ಹೆಚ್ಚು ಕುಟುಂಬಗಳು ಗೋಕಾಕ್, ನಿಪ್ಪಾಣಿ, ಅಥಣಿ, ಮೂಡಲಗಿ, ಹುಕ್ಕೇರಿ, ಕಾಗವಾಡ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಹದ ಎಫೆಕ್ಟ್ ಉಂಟಾಗಿದೆ.…

    Read More »
  • Local Newsಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ

    ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ

    ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್ 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ‌ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ…

    Read More »
  • Business NewsGold Price on July 23nd: ಬಜೆಟ್‌ ಮಂಡನೆಗೂ ಮುನ್ನವೇ ಬಂಗಾರ ದರದಲ್ಲಿ ಭಾರೀ ಇಳಿಕೆ, ಬೆಂಗಳೂರಿನಲ್ಲಿ ಎಷ್ಟಿದೆ ಪರಿಶೀಲಿಸಿ

    Gold Price on July 23nd: ಬಜೆಟ್‌ ಮಂಡನೆಗೂ ಮುನ್ನವೇ ಬಂಗಾರ ದರದಲ್ಲಿ ಭಾರೀ ಇಳಿಕೆ, ಬೆಂಗಳೂರಿನಲ್ಲಿ ಎಷ್ಟಿದೆ ಪರಿಶೀಲಿಸಿ

    Gold price on July 23rd: ಬಂಗಾರ ದರದಲ್ಲಿ ಏರಿಳಿಯ ಆಗುತ್ತಲೇ ಬರುತ್ತಿದೆ. ಇನ್ನು ನಿನ್ನೆಗೆ ಅಂದರೆ (ಜುಲೈ 22) ಹೋಲಿಕೆ ಮಾಡಿದರೆ ಇಂದು (ಜುಲೈ 23) ಕೇಂದ್ರ ಬಜೆಟ್‌ ಮಂಡನೆಗೂ ಮುನ್ನವೇ ದರದಲ್ಲಿ ಭಾರೀ ಇಳಿಕೆಯಾಗಿದೆ. ಹಾಗಾದರೆ ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರ ದರ (22 & 24 ಕ್ಯಾರೇಟ್) ಎಷ್ಟಿದೆ ಎನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ತಿಳಿಯಿರಿ.   ನಿನ್ನೆ (ಜುಲೈ 22) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ…

    Read More »
  • Local Newsಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

    ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

    ಬೆಳಗಾವಿ: ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.   ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್‌ ಪಾವತಿಸಬೇಕು. ಬರದಿಂದ ತತ್ತರಿಸಿದ ರೈತರಿಗೆ ತ್ವರಿತವಾಗಿ…

    Read More »
  • Local Newsಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್‌ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

    ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್‌ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

    ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಂಕಲಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Read More »
  • State Newsಗೋವಾ-ಬೆಳಗಾವಿ ಸಂಪರ್ಕಿಸುವ ವಾಹನ ಸಂಚಾರ ಸ್ಥಗಿತ

    ಗೋವಾ-ಬೆಳಗಾವಿ ಸಂಪರ್ಕಿಸುವ ವಾಹನ ಸಂಚಾರ ಸ್ಥಗಿತ

    ಪಣಜಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ದೂಧ್ ಸಾಗರ ದೇವಸ್ಥಾನದ ಸಮೀಪವಿರುವ ಅನ್ಮೋದ್ ಘಾಟ್‍ನಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿದೆ. ಇಡೀ ರಸ್ತೆಯಲ್ಲಿ ಮಣ್ಣು ಹರಡಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನಮೋಡ ಘಾಟ್ ರಸ್ತೆಯು ಗೋವಾ ಮತ್ತು ಬೆಳಗಾವಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಸದ್ಯ ಅನ್ಮೋದ್ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತದಿಂದಾಗಿ ಈ ಮಾರ್ಗವನ್ನು ತಾತ್ಕಾಲಿಕವಾಗಿ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಈ ಮಾರ್ಗದಲ್ಲಿ…

    Read More »
Back to top button