ಲೋಕಸಭಾ ಚುನಾವಣೆ 2024: 17 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಔಟ್, ಇಲ್ಲಿದೆ ಲೀಸ್ಟ್

WhatsApp Group Join Now
Telegram Group Join Now

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದಂತ ಕಾಂಗ್ರೆಸ್ ಪಕ್ಷ, ಇನ್ನುಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಪಟ್ಟಿ ಹೊರ ಬಿದ್ದಿದ್ದು, ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಅಂತ ಮುಂದೆ ಓದಿ.

 

ನಿನ್ನೆ ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ದೆಹಲಿಯ ಕಾಂಗ್ರೆಸ್ ಸಿಇಸಿ ಸಭೆಯ ಬಳಿಕ ಮಾತನಾಡಿದ್ದಂತ ಸಿಎಂ ಸಿದ್ಧರಾಮಯ್ಯ ಇಂದು ಕರ್ನಾಟಕದ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸೋದಾಗಿ ಘೋಷಣೆ ಮಾಡಿದ್ದರು. ಇದಕ್ಕೂ ಮುನ್ನಾ ಕಾಂಗ್ರೆಸ್ ಉನ್ನತ ಮೂಲಗಳಿಂದ 17 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೊರ ಬಿದ್ದಿದೆ.

ಹೀಗಿದೆ ಕರ್ನಾಟಕದ 17 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

  • ಚಿತ್ರದುರ್ಗ – ಚಂದ್ರಪ್ಪ
  • ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
  • ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
  • ಬಾಗಲಕೋಟೆ – ಸಂಯುಕ್ತ ಪಾಟೀಲ್
  • ಹುಬ್ಬಳ್ಳಿ- ವಿನೋದ್ ಅಸೂಟಿ
  • ದಾವಣಗೆರೆ – ಡಾ. ಪ್ರಭಾ ಮಲ್ಲಿಕಾರ್ಜುನ
  • ಕೊಪ್ಪಳ – ರಾಜಶೇಖರ್ ಹಿಟ್ನಾಳ್
  • ಬೀದರ್ – ರಾಜಶೇಖರ್ ಪಾಟೀಲ್
  • ದಕ್ಷಿಣ ಕನ್ನಡ- ಪದ್ಮರಾಜ್
  • ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗಡೆ
  • ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ – ಮನ್ಸೂರ್ ಅಲಿಖಾನ್
  • ಬೆಂಗಳೂರು ಉತ್ತರ -ಪ್ರೊ ರಾಜೀವ್ ಗೌಡ
  • ಮೈಸೂರು – ಎಂ. ಲಕ್ಷ್ಮಣ್
  • ರಾಯಚೂರು- ಕುಮಾರ್ ನಾಯ್ಕ್
  • ಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್
  • ಚಿಕ್ಕಬಳ್ಳಾಪುರ- ರಕ್ಷಾರಾಮಯ್ಯ
WhatsApp Group Join Now
Telegram Group Join Now
Back to top button