BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

WhatsApp Group Join Now
Telegram Group Join Now
Back to top button