ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್! ಕಾರ್ಮಿಕ ಸಚಿವ ಸಂತೋಷ್ ಲಾಡ್

WhatsApp Group Join Now
Telegram Group Join Now

ಬೆಂಗಳೂರು, ಜುಲೈ 17: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

 

ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ ಸರ್ಕಾರಕ್ಕೆ ಸಿಗಲಿದೆ. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಈ ವಿಧೇಯಕ ಜಾರಿಯಾಗುವುದಲ್ಲಿ ಮಹತ್ವದಾಗಿದ್ದು, ಇಲಾಖೆಯ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಈ ವಿಧೇಯಕ ಜಾರಿಯಿಂದ ಅಸಂಖ್ಯಾತ ಕಾರ್ಮಿಕರ ಬಾಳಿಗೆ ಭದ್ರತೆ ದೊರೆಯಲಿದೆ .

ಕಳೆದ ಹಲವು ವರ್ಷಗಳಿಂದ ಈ ಯೋಜನೆ ಜಾರಿಗೆ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವು ಸಾಕಾರಗೊಂಡಿರಲಿಲ್ಲ, ಇದೀಗ ಸಚಿವ ಸಂತೋಷ್‌ ಲಾಡ್‌ ಅವರು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲೂ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವುಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈ ಬಾರಿ ಸಂತೋಷ್‌ ಲಾಡ್‌ ಅವರ ಅವಿರತ ಪ್ರಯತ್ನದ ಫಲವಾಗಿ ಈಗ ಕಾಲ ಕೂಡಿ ಬಂದಿದೆ. ಮನರಂಜನಾ ಕ್ಷೇತ್ರದ ಕಾರ್ಮಿಕರು ಸರಿಯಾದ ಉದ್ಯೋಗ ಭದ್ರತೆ ಇಲ್ಲದೆ ಯಾವುದೇ ಸೌಲಭ್ಯ ಇಲ್ಲದೇ ಅನಿಶ್ಚಿತತೆಯಲ್ಲಿ ಇರುವವರಿಗೆ ವರದಾನವಾಗಲಿದೆ.

ಸಂತೋಷ್‌ ಲಾಡ್‌ ಅವರು ಕಾರ್ಮಿಕ ಸಚಿವರಾದಾಗಿನಿಂದ ಇಂತಹ ಹಲವಾರು ಹೊಸ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಗಿಗ್‌ ಕಾರ್ಮಿಕರಿಗಾಗಿಯೂ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ.

ವಿಧೇಯಕದ ಪ್ರಮುಖ ಅಂಶಗಳು

*ಸಿನಿಮಾ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಜೀವವಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಶವಸಂಸ್ಕಾರ ವೆಚ್ಚ, ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮುಂತಾದ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು.

*ಸಿನಿಮಾ ಹಾಗೂ ಸಂಬಂಧಿತ ಕ್ಷೇತ್ರಗಳ ಪ್ರದರ್ಶನದ ಟಿಕೆಟ್ ಗಳ ಮೇಲೆ ಶೇ.2 ರಷ್ಟು ಮೀರದಂತೆ ಆದರೆ ಶೇ 1 ಕ್ಕೆ ಕಡಿಮೆಯಿಲ್ಲದಷ್ಟು ಸುಂಕ ವಿಧಿಸುವ ಮೂಲಕ ಹಾಗೂ ಸಂಬಂಧಿತ ಸಂಸ್ಥೆಗಳಿಂದ ವಂತಿಗೆ ಸಂಗ್ರಹಿಸುವ ಮೂಲಕ ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ನಿಧಿ ಸ್ಥಾಪಿಸಿ ಆವಶ್ಯಕವಿರುವ ನಿಧಿ ಸಂಗ್ರಹಣೆಗೆ ಉದ್ದೇಶಿಸಲಾಗಿದೆ.

*ನಿಧಿ ಸಂಗ್ರಹಣೆ, ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ವಿತರಣೆಗೆ ಪ್ರತ್ಯೇಕವಾದ Karnataka Cine and Cultural Activities Welfare Board ಅನ್ನು ರಚಿಸಲು ಉದ್ದೇಶಿಸಲಾಗಿದೆ.

*ಸಿನಿಮಾ ಮತ್ತು ಇತರೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ತಂತ್ರಜ್ಞರು, ಕಾರ್ಮಿಕರಿಗೆ ನಿಯಮಿತವಾಗಿ ಕೆಲಸವಿರುವುದಿಲ್ಲ. ಅವರು ಅವಶ್ಯಕತೆ ಇರುವ ಅವಧಿಯಲ್ಲಿ ಮಾತ್ರವೇ ಕೆಲಸದಲ್ಲಿ ತೊಡಗಿರುತ್ತಾರೆ. ಕೆಲವು ಅವಧಿ ಅವರು ನಿರುದ್ಯೋಗಿಯಾಗಿರುತ್ತಾರೆ.

*ಈ ಯೋಜನೆಯ ಜಾರಿಗೆ ರಾಜ್ಯ ಸರ್ಕಾರದ ಅನುದಾನವನ್ನು ಅವಲಂಬಿಸುವ ಬದಲು ಪ್ರತ್ಯೇಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು.

*ವಿಧೇಯಕ ಸಂಬಂಧ ಆರ್ಥಿಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ, ಕಾನೂನು ಇಲಾಖೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜೊತೆಗೆ ಸಭೆ ನಡೆಸಿ ಸಮಾಲೋಚನೆ ನಡೆಸಲಾಗಿದೆ.

WhatsApp Group Join Now
Telegram Group Join Now
Back to top button