ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

WhatsApp Group Join Now
Telegram Group Join Now

ಬೆಳಗಾವಿ: ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

 

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್‌ ಪಾವತಿಸಬೇಕು. ಬರದಿಂದ ತತ್ತರಿಸಿದ ರೈತರಿಗೆ ತ್ವರಿತವಾಗಿ ಬೆಳೆ ಹಾನಿ ಪರಿಹಾರ ವಿತರಿಸಬೇಕು. ರೈತರ ವಾಹನಗಳನ್ನು ಪೊಲೀಸರು ಅನಗತ್ಯವಾಗಿ ತಡೆಗಟ್ಟಿ ತೊಂದರೆ ನೀಡುವುದನ್ನು ನಿಲ್ಲಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 7 ತಾಸು ತ್ರಿಫೇಸ್‌ ವಿದ್ಯುತ್‌ ನೀಡಬೇಕು ಎಂದು ಆಗ್ರಹಿಸಿದರು.

WhatsApp Group Join Now
Telegram Group Join Now
Back to top button