ವಿಕಲಚೇತನರಿಂದ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆಡಳಿತಾಧಿಕಾರಿ
ವಿಕಲಚೇತನರಿಂದ ಲಂಚ ಪಡೆಯುತ್ತಿದ್ದಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ.
ಗ್ರಾಮ ಆಡಳಿತಾಧಿಕಾರಿ ಗಣೇಶ್ ಕೆ.ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕುಂಕುವಾ ಗ್ರಾಮದ ವೀರೇಶ್ ಎಂಬುವವರ ಸಹೋದರ ಹರ್ಷ ಎಂಬುವವರಿಗೆ ವಿಕಲಚೇತನ ಪ್ರಮಾಣಪತ್ರ ನೀಡಲು 6 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ. ಹಣ ಪಡೆಯುತ್ತಿದ್ದಾಗಲೇ ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ ಪಿ ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆದಿದೆ.
Follow Us