Anna Bhagya Yojana: ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಬಂದಿಲ್ವಾ..? ಈ ಕೆಲಸ ಮಾಡಿ ಸಾಕು..!

WhatsApp Group Join Now
Telegram Group Join Now

ಬೆಂಗಳೂರುಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿದೆ.

ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು.

ನಿಮ್ಮ ಮೊಬೈಲ್ ಫೋನ್‌ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ನೀವು ಸುಲಭವಾಗಿ ಪರಿಶೀಲಿಸಬಹುದು. ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ. ಈ ಹಣವನ್ನು ಫಲಾನುಭವಿಯ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ನಿಮ್ಮ ರೇಷನ್ ಕಾರ್ಡ್ ಹಣ ಖಾತೆಗೆ ಜಮೆ ಆಗಿದೆಯೇ ಎಂಬುದನ್ನು ಆನ್‌ಲೈನಲ್ಲೇ ಪರಿಶೀಲಿಸಬಹುದು.

ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆ ಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿರುವ ಪಲಾನುಭ ಭವಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 5ಕೆಜಿ ಅಕ್ಕಿ ಬದಲಾಗಿ Anna Bhagya DBT ಮೂಲಕ ಹಣ ಜಮೆ ಮಾಡಲಾಗುತ್ತಿದೆ.

ಅದರಂತೆ ಪ್ರತಿ ತಿಂಗಳು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸರ್ಕಾರ ಹಣ ವರ್ಗಾವಣೆ ಮಾಡುತ್ತದೆ. ಡಿಸೆಂಬರ್ ತಿಂಗಳ ಹಣ ಜನವರಿಯಲ್ಲಿ , ಜನವರಿ ತಿಂಗಳ ಹಣ ಫೆಬ್ರುವರಿಯಲ್ಲಿ ಹೀಗೆ ಬಿಡುಗಡೆ ಮಾಡಲಾಗುತ್ತಿದೆ. ಇನ್ನು 15 ದಿನದ ಒಳಗಾಗಿ ಫಲಾನುಭವಿಗಳ ಖಾತೆಗೆ ಹಣ ತಲುಪಲಿದೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿದೆ.

ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

  • ಕರ್ನಾಟಕ ಸರ್ಕಾರದ ವೆಬ್‌ಸೈಟ್ https://www.karnataka.gov.in/ ಗೆ ಭೇಟಿ ನೀಡಿ
  • E-services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • DBT status ಲಿಂಕ್ ಅನ್ನು ಕ್ಲಿಕ್ ಮಾಡಿಕೊಳ್ಳಿ
  • ನಿಮ್ಮ ರೇಷನ್ ಕಾರ್ಡ್‌ನಲ್ಲಿ ಯಾವ ಸಮಯದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಎಂಬುದನ್ನು ಆಯ್ಕೆಮಾಡಿ
  • ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್‌ ಕ್ಲಿಕ್ ಮಾಡಿ.
  • ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್‌ನಲ್ಲಿ ತೋರಿಸಲಾಗುತ್ತದೆ.
  • ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಅನ್ನು ಸಂಪರ್ಕಿಸಬಹುದು.

ಆನ್‌ಲೈನ್‌ನಲ್ಲಿ ರೇಷನ್‌ ಕಾರ್ಡ್ ತಿದ್ದುಪಡಿ ಹೇಗೆ?

  • https://ahara.kar.nic.in/ಗೆ ಲಾಗ್ ಇನ್ ಆಗಿ
  • ಮೇನ್ ಪೇಜ್‌ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್‌ ಮಾಡಿ
  • ಅದಾದ ಬಳಿಕ ತಿದ್ದುಪಡಿ/ ಹೊಸ ಸೇರ್ಪಡೆಗೆ ವಿನಂತಿ ಬಟನ್‌ ಕ್ಲಿಕ್‌ ಮಾಡಿ. ಈಗ ಹೊಸ ಪೇಜ್ ತೆರೆಯುತ್ತದೆ.
  • ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
  • ಹೊಸ ಸೇರ್ಪಡೆ/ ತಿದ್ದುಪಡಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
  • ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ
  • ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿರಿ
  • ಅರ್ಜಿ ಸಲ್ಲಿಕೆಯ ರಿಜಿಸ್ಟರ್‌ ನಂಬರ್‌ ಸಿಗಲಿದೆ
  • ಈ ನಂಬರ್‌ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್‌ ಅನ್ನು ಟ್ರ್ಯಾಕ್‌ ಮಾಡಲು ಸಾಧ್ಯವಾಗಲಿದೆ.
WhatsApp Group Join Now
Telegram Group Join Now
Back to top button