ಪಡಿತರ ಚೀಟಿದಾರರೇ ಗಮನಿಸಿ : ʻಅನ್ನಭಾಗ್ಯʼ ಹಣ ಪಡೆಯಲು ಈ ದಾಖಲೆಗಳನ್ನು ಪರಿಶೀಲಿಸಿಕೊಳ್ಳಿ
ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳು:
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾರ್ಡ್‍ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.