ಬೆಳಗಾವಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

WhatsApp Group Join Now
Telegram Group Join Now

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಇದ್ದಾರೆ.

ರಾಜ್ಯದಲ್ಲಿ ಲೋಕಸಭಾ ಚುನವಣೆಯ 2ನೇ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಬೆಳಿಗ್ಗೆಯಿಂದಲೇ ಉತ್ಸಾಹದಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಗಾವಿಯ ವಿಜಯನಗರ ಮತಗಟ್ಟೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು.

ಮತಗಟ್ಟೆ ಸಂಖ್ಯೆ 61ರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಳ್ಕರ್, ಸಹೋದರ ಚೆನ್ನರಾಜ ಹಟ್ಟಿಹೊಳಿ ಹಾಗೂ ಕುಟುಂಬದವರು ತಮ್ಮ ಹಕ್ಕು ಚಲಾಯಿಸಿದರು.

WhatsApp Group Join Now
Telegram Group Join Now
Back to top button