BIG NEWS : ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಇಂದು ʻಹೊಸ ಕೊರೊನಾ ಮಾರ್ಗಸೂಚಿʼ ಪ್ರಕಟ

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವರ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿ ಮೊದಲ ಬಾರಿಗೆ ಸಭೆ ನಡೆಸಲಿದ್ದು, ಹೊಸ ಕೊರೊನಾ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಅಭಿಯಾನ ನಡೆಸುವ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆಯಾಗಲಿದ್ದು, ಕೊರೊನಾ ಲಸಿಕೆ ಕುರಿತು ಮಾರ್ಗಸೂಚಿ ಸಿದ್ಧಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ರಾಜ್ಯದಲ್ಲಿ 436 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 3.96 ರಷ್ಟು ಇದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Back to top button