BREAKING: ಕಿರಾತಕ ಸಿನಿಮಾ ವಿಲನ್ ಡ್ಯಾನಿಯಲ್​ ಬಾಲಾಜಿ ನಿಧನ

WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 30: ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದ ನಟ ಡ್ಯಾನಿಯಲ್​ ಬಾಲಾಜಿ (48) ವಿಧಿವಶರಾಗಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್​ ಬಾಲಾಜಿ ನಿನ್ನೆ( ಮಾರ್ಚ್ 29) ಶುಕ್ರವಾರದಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

 

ಶುಕ್ರವಾರ ಡ್ಯಾನಿಯಲ್​ ಬಾಲಾಜಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಪಾರ್ಥಿವ ಶರೀರವನ್ನು ಶನಿವಾರ ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಮೂಲಗಳು ತಿಳಿಸಿವೆ.

 

 

ನಟ ಡ್ಯಾನಿಯಲ್​ ಬಾಲಾಜಿ ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರಾಗಿದ್ದು, ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ರಾಕಿಂಗ್​ ಸ್ಟಾರ್​ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್​ ಆಗಿದ್ದರು.

 

ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಡ್ಯಾನಿಯಲ್​ ಬಾಲಾಜಿ ಕನ್ನಡ ಕಿರಾತಕ, ಶಿವಾಜಿನಗರ, ಬೆಂಗಳೂರು ಅಂಡರ್​ವರ್ಲ್ಡ್​​​ ಹಾಗೂ ಡವ್​ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡ ಸಿನಿ ಪ್ರಿಯರಿಗೂ ಕೂಡ ಚಿರಪರಿಚಿತರಾಗಿದ್ದರು.

 

ಸಿನಿಮಾ ರಂಗ ಹೊರತು ಪಡಿಸಿ ಧಾರ್ಮಿಕ ಕಾರ್ಯಗಳಲ್ಲೂ ಡ್ಯಾನಿಯಲ್​ ಬಾಲಾಜಿ ಸಕ್ರಿಯರಾಗಿದ್ದು, ಅನೇಕ ದೇವಾಲಯಗಳನ್ನು ಕಟ್ಟಿಸಿದ್ದಾರೆ. ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Back to top button