BREAKING NEWS: ರಮೇಶ್ ಜಾರಕಿಹೊಳಿ ಕಾರ್ಖಾನೆ ಮೇಲೆ ಸಿಐಡಿ ದಿಢೀರ್ ದಾಳಿ
ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್ ಬ್ಯಾಂಕ್ ನಿಂದ 439 ಕೊಟಿ ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಜ.5ರಂದು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಇಂದು ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ.
Follow Us