ಅನರ್ಹ BPL ಕಾರ್ಡ್‌ ರದ್ದು ಮಾಡಿ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ CM ಸಿದ್ದರಾಮಯ್ಯ

WhatsApp Group Join Now
Telegram Group Join Now

ಬೆಂಗಳೂರು: ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು.

ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಇದಲ್ಲದೇ ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ.ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ.

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ ಅಂಥ ತಿಳಿಸಿದ್ದಾರೆ.

WhatsApp Group Join Now
Telegram Group Join Now
Back to top button