2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: ಸಿಎಂ ಸಿದ್ದರಾಮಯ್ಯ

WhatsApp Group Join Now
Telegram Group Join Now

ಕಾರವಾರ: ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎರಡು-ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು. ಆಯ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ಯಾವುದೇ ದೊಡ್ಡ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ ಹೇಳಿದ್ದಾರೆ.

ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯ ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್ ಪಟ್ಟಿ ಕೂಡ ಬಿಡುಗಡೆಯಾಗಬಹುದು. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದರು.
ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು, ವೀಕ್ಷಕರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ರಾಜ್ಯಸಭಾ ಮತ್ತು ಲೋಕಸಭೆ ಸದಸ್ಯರು, ಬ್ಲಾಕ್ ಸಮಿತಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ನೀಡಿದ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿಗಳನ್ನು ನಿರ್ಧರಿಸುತ್ತಿದ್ದೇವೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಗುರುವಾರ ದೆಹಲಿಯಲ್ಲಿ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು” ಎಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

WhatsApp Group Join Now
Telegram Group Join Now
Back to top button