ರಾಜ್ಯದಲ್ಲಿ ʻಡೆಂಗ್ಯೂ, ಝೀಕಾ ವೈರಸ್‌ʼ ಆತಂಕ : ರಾಜ್ಯ ಸರ್ಕಾರದಿಂದ ಗ್ರಾಮಪಂಚಾಯಿತಿಗಳಿಗೆ ಮಹತ್ವದ ಸೂಚನೆ

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಡೆಂಘಿ, ಝೀಕಾ ವೈರಸ್‌ ವೇಗವಾಗಿ ಹರಡುತ್ತಿದೆ. ರೋಗಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗೆ ಕೆಲವು ಸೂಚನೆಗಳನ್ನು ನೀಡಿದೆ.

ಡೆಂಘಿ, ಝೀಕಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಸೂಚನೆಗಳು

* ಕುಡಿಯುವ ನೀರಿನ ಟ್ಯಾಂಕ್, ಶೌಚಾಲಯಗಳಲ್ಲಿ ನೀರು ಸಂಗ್ರಹಿಸುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಬೇಕು

* ಮನೆ, ಅಂಗಡಿ, ವಾಣಿಜ್ಯ ಸಂಕೀರ್ಣ, ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು

* ಅಂಗನವಾಡಿ, ಶಾಲಾ – ಕಾಲೇಜುಗಳ ಚಾವಣಿಗಳು, ಆವರಣಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವುದು

* ನಲ್ಲಿ ಹಾಗೂ ಕೊಳವೆ ಬಾವಿಗಳಿಂದ ನೀರು ಸರಾಗವಾಗಿ ಹರಿಯುವಂತೆ ಸೂಕ್ತ ಚರಂಡಿ ವ್ಯವಸ್ಥೆ ಮಾಡಬೇಕು

* ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು. ಪಾಲಿಸದವರಿಗೆ ದಂಡ ವಿಧಿಸಬೇಕು.

* ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ನೀರು ಶೇಖರಣೆ ತಡೆಗಟ್ಟಲು ಅವುಗಳನ್ನು ನಾಲ್ಕು ಭಾಗಗಳಾಗಿ ಒಡೆದು ಬೋರಲು ಇಡಬೇಕು

* ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಕಾರ್ಯಕ್ರಮ ಆಯೋಜಿಸಬೇಕು.

WhatsApp Group Join Now
Telegram Group Join Now
Back to top button