ಜ.11 ರಂದು ದೆಹಲಿಗೆ ಬರಲು 28 ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

WhatsApp Group Join Now
Telegram Group Join Now

ಬೆಂಗಳೂರು: ಜನವರಿ 11 ರಂದು ಲೋಕಸಭಾ ಚುನಾವಣೆಗೆ ಸಿದ್ದತೆಗೆ ಕುರಿತಂತೆ ಮಹತ್ವದ ಸಭೆ ನಡೆಯಲಿದ್ದು ರಾಜ್ಯದ 28 ಕ್ಷೇತ್ರಗಳಿಗೆ ಸಂಯೋಜಕರಾಗಿ ನೇಮಕ ಮಾಡಿರುವ 28 ಸಚಿವರನ್ನು ಕಾಂಗ್ರೆಸ್ ಹೈಕಮಾಂಡ್ ಬರಲು ಸೂಚಿಸಿದೆ.

ಅಂದು ಮಧಯ 3 ಕ್ಕೆ ಮಹತ್ವದ ಸಭೆ ನಡೆಯಲಿದೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳಿಗೂ ಸಂಯೋಜಕ ಅಂದರೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.ಅವರಿಗೆ ಜನವರಿ 11 ರಂದು ದೆಹಲಿಗೆ ಬರುವಂತೆ ಸೂಚಿಸಿದೆ.

ಜನವರಿ 10 ಬುಧವಾರದಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಚಿವರೊಂದಿಗೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

WhatsApp Group Join Now
Telegram Group Join Now
Back to top button