‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಮಹಿಳೆ : ಡಿಸಿಎಂ ಡಿಕೆಶಿ ಅಭಿನಂದನೆ..!

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ 2000 ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ ಸುದ್ದಿ ವ್ಯಾಪಕವಾಗಿ ವೈರಲ್ ಆಗಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ ಮಹಿಳೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ.

ರಾಜಕೀಯ ಮಾಡಲೆಂದೇ ಎಷ್ಟೋ ಜನ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ ಮಹಿಳೆಗೆ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Back to top button