ಡಿವೈಎಸ್‌ಪಿ-ಸಿಪಿಐ ಅಮಾನತು

WhatsApp Group Join Now
Telegram Group Join Now

ಮೈಸೂರು: ದಾವಣಗೆರೆಯ  ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳ ಅಮಾನತಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚನ್ನಗಿರಿಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೂರ್ಛೆ ರೋಗದಿಂದ ಮೃತಪಟ್ಟಿದ್ದಾನೆಯೇ ವಿನಃ ಅದು ಲಾಕಪ್‌ ಡೆತ್‌ ಅಲ್ಲ. ಪೊಲೀಸರು ಆ ವ್ಯಕ್ತಿಯನ್ನು ಎಫ್‌ಐಆರ್‌ ಇಲ್ಲದೇ ಠಾಣೆಗೆ ಕರೆತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲು ಆದೇಶಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಪೊಲೀಸ್ ಠಾಣೆಯಲ್ಲಿದ್ದಾಗಲೇ ಮೃತಪಟ್ಟ ಆದಿಲ್ ಚನ್ನಗಿರಿ ಪಟ್ಟಣದ ಟಿಪ್ಪು ನಗರದವರು. ಮೂಲತಃ ಕಾರ್ಪೆಂಟರ್. ಆದರೆ, ಮಟ್ಕಾ ಏಜೆಂಟ್ ಎಂಬ ಆರೋಪದ ಮೇಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಠಾಣೆಗೆ ಕರೆತಂದ ಕೆಲ ಹೊತ್ತಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳುತ್ತಿದ್ದಾರೆ. ಕರ್ತವ್ಯಲೋಪದ ಆರೋಪದ ಮೇಲೆ ಡಿವೈಎಸ್‌ಪಿ ಪ್ರಶಾಂತ್, ಸಿಪಿಐ ನಿರಂಜನ್‌ರನ್ನು ಅಮಾನತು ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Back to top button