ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

WhatsApp Group Join Now
Telegram Group Join Now

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಐವರ ವಿರುದ್ಧ ಬೆಂಗಳೂರಿನ ವಿವಿಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಚಾಮರಾಜಪೇಟೆಯಲ್ಲಿರುವ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ ನಿಂದ 439 ಕೋಟಿ 7 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದೇ ಬ್ಯಾಂಕ್ ಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಗೋಕಾಕ್ ನಲ್ಲಿರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ 2013ರಿಂದ 2017ರವರೆಗೆ 232 ಕೋಟಿ 88 ಲಕ್ಷ ಸಾಲ ಪಡೆದಿದ್ದು, 2023ವರೆಗೆ ಒಟ್ಟು 439 ಕೋಟಿ 7 ಲಕ್ಷ ಸಾಲದ ಮೊತ್ತ ಬಾಕಿ ಇದ್ದು, ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೇ ಮೋಸ ಮಾಡುವ ಉದ್ದೇಶಕ್ಕೆ ಯಾವುದೇ ಮಾಹಿತಿಯನ್ನೂ ನೀಡದೇ ಆಡಳಿತ ಮಂಡಳಿ ಹುದ್ದೆಯಿಂದಲೂ ಹೊರಬಂದಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಎಂಬುವವರು ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ, ವಸಂತ್ ಪಾಟೀಲ್, ಶಂಕರ್ ಪಾವಡೆ ಹಾಗೂ ಇಬ್ಬರು ಪದಾಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

WhatsApp Group Join Now
Telegram Group Join Now
Back to top button