ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ; 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್.

WhatsApp Group Join Now
Telegram Group Join Now

ಬೆಳಗಾವಿ, : ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ (Belagavi Congress Office) ಬಿಜೆಪಿ ಕಾರ್ಯಕರ್ತರು ನುಗ್ಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಗೆ ನುಗ್ಗಿದ 27ಬಿಜೆಪಿ ಕಾರ್ಯಕರ್ತರವಿರುದ್ಧ ಇದೀಗ ಎಫ್‌ಐಆರ್(FIR) ದಾಖಲಿಸಲಾಗಿದೆ. ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ ಮಾರ್ಕೆಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಇಂದು ಬಿಜೆಪಿ ಕಾರ್ಯಕರ್ತರಿಂದ ದೊಡ್ಡ ಹೈಡ್ರಾಮ ಬೆಳಗಾವಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಕರೆ ಕೊಟ್ಟಿದ್ದ ಹೋರಾಟ, ಬೆಳಗಾವಿಯಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಎಮ್ಮೆಗಳನ್ನ ತಂದು, ತಲೆ ಮೇಲೆ ಹಾಲಿನ ಕ್ಯಾನ್ ಹಿಡಿದು ಹೋರಾಟ ಶುರು ಮಾಡಿದರು. ಬಳಿಕ ಪ್ರತಿಭಟನಾ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಡಿಸಿ ಕಚೇರಿ ಎದುರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

 

WhatsApp Group Join Now
Telegram Group Join Now
Back to top button