ಆರ್‌. ಅಶೋಕ್‌ ಸೇರಿ 43 ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್‌

WhatsApp Group Join Now
Telegram Group Join Now

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬೆಂಬಲಿಸಿ ಪ್ರತಿಭಟನೆ (BJP Protest) ನಡೆಸಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಸೇರಿ 43 ಬಿಜೆಪಿ ಮುಖಂಡರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್‌ ದಾಖಲಾಗಿದೆ.

 

ಹುಬ್ಬಳ್ಳಿ -ಧಾರವಾಡ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎ1 ಆರ್ ಅಶೋಕ (ವಿಪಕ್ಷ ನಾಯಕ), ಎ2 ಅರವಿಂದ ಬೆಲ್ಲದ್ (ವಿಪಕ್ಷ ಉಪನಾಯಕ), ಎ3 ಮಹೇಶ್ ಟೆಂಗಿನಕಾಯಿ ( ಹು-ಧಾ ಸೆಂಟ್ರಲ್ ಶಾಸಕ), ಎ7 ಎಂ.ಆರ್. ಪಾಟೀಲ್ (ಕುಂದಗೋಳ ಶಾಸಕ), ಎ8 ಪ್ರದೀಪ್ ಶೆಟ್ಟರ್ (ವಿಪ ಸದಸ್ಯ), ಎ9 ಅಶೋಕ ಕಾಟವೆ (ಮಾಜಿ ಶಾಸಕ), ಎ18 – ಪ್ರಭು ಕುಂದಗೋಳಮಠ (ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ) ಸೇರಿ 43 ಬಿಜೆಪಿ ಮುಖಂಡರ ವಿರುದ್ಧ IPC U/S 290, 504 ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಕೋರ್ಟ್‌ನಿಂದ ಅನುಮತಿ ಪಡೆದು ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

 

ರೌಡಿಶೀಟರ್ ಶ್ರೀಕಾಂತ್‌ ಪೂಜಾರಿ ಬಂಧನವನ್ನು ವಿರೋಧಿಸಿ ಜ.3ರಂದು ನಡೆಸಿದ ಪ್ರತಿಭಟನೆ ವೇಳೆ ಹುಬ್ಬಳ್ಳಿ ಶಹರ ಪೊಲೀಸ ಠಾಣೆಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಪ್ರಯತ್ನಿಸಿ, ಪ್ರಚೋದನಕಾರಿ ಭಾಷಣವನ್ನು ಮಾಡಿ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ತೊಂದರೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌, ಲುಚ್ಚಾ, ಹೇಡಿ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ, ಅವರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಮಾನ ಮಾಡಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಹೀಗಾಗಿ ಪ್ರತಿಭಟನಾಕಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

WhatsApp Group Join Now
Telegram Group Join Now
Back to top button