ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

WhatsApp Group Join Now
Telegram Group Join Now

ಲಬುರಗಿ: ಅಗರಬತ್ತಿ ಕಾರ್ಖಾನೆಯಲ್ಲಿ(Agarbati Factory) ಬೆಂಕಿ(Fire) ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಕಲಬುರಗಿ (kalaburgi) ನಗರದ ಕೈಲಾಸ ನಗರದಲ್ಲಿ ನಡೆದಿದೆ.

ಚಂದ್ರಶೇಖರ್ ಸರಸಂಬಿ ಎಂಬುವವರ ಒಡೆತನದ ಫ್ಯಾಕ್ಟರಿ ಇದಾಗಿದ್ದು, ಲಕ್ಷಾಂತರ ಮೌಲ್ಯದ ಅಗರಬತ್ತಿ (Agarbati Factory) ಸುಟ್ಟು ಭಸ್ಮವಾಗಿದೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಇಂದು ಫ್ಯಾಕ್ಟರಿಯನ್ನು ಬಂದ್ ಮಾಡಲಾಗಿತ್ತು. ಈ ಸಮಯದಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಹೊತ್ತಿನಲ್ಲೇ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಯವರು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಆರ್ ಜೆ ನಗರ ಪೊಲೀಸ್ ಠಾಣಾ(police station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Back to top button