ಭಾರೀ ಮಳೆ: ಚಿಕ್ಕೋಡಿ ಭಾಗದ ನಾಲ್ಕು ಸೇತುವೆಗಳು ಮುಳುಗಡೆ

WhatsApp Group Join Now
Telegram Group Join Now

ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿನ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಜಿಲ್ಲೆಯಲ್ಲಿನ ಹಲವೆಡೆ ರಸ್ತೆಗಳು, ಗ್ರಾಮಗಳು ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ.

 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಗೆ ಸುಮಾರು 55 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ. ಒಂದೇ ದಿನದಲ್ಲಿ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ಇದರಿಂದ ಚಿಕ್ಕೋಡಿ ಭಾಗದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

 

ಚಿಕ್ಕೋಡಿಯಲ್ಲಿನ 4 ಸೇತುವೆಗಳು ಮುಳುಗಡೆಯಾಗಿವೆ. ನಿಪ್ಪಾಣಿ ತಾಲೂಕಿನ ಕುನ್ನೂರು-ಬಾರವಾಡ, ಕಾರದಾಗ-ಬೋಜ್, ಕುನ್ನೂರು-ಭೋಜವಾಡಿ ಸೇರಿದಂತೆ ಒಟ್ಟು ನಾಲ್ಕು ಸೇತುವೆಗಳು ಜಲಾವೃತವಾಗಿದ್ದು, ಸೇತುವೆ ಮೇಲೆ ನದಿ ನೀರು ಉಕ್ಕಿ ಹರಿಯುತ್ತಿವೆ. ಚಿಕ್ಕೋಡಿ ಭಾಗದ ರಸ್ತೆ ಸಂಪರ್ಕ ಕಡಿತಗೊಂಡಿದೆ.

WhatsApp Group Join Now
Telegram Group Join Now
Back to top button