ಲೋನ್ ಕೊಡೋದಾಗಿ ಕೇಂದ್ರ ಸಚಿವೆ ಹೆಸರು ಹೇಳಿ ಕಂತೆ ಕಂತೆ ಹಣ ಲೋಟಿ ಮಾಡಿದ ವಂಚಕರು.!

WhatsApp Group Join Now
Telegram Group Join Now

ಆನೇಕಲ್: ಲೋನ್ ಕೊಡೋದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ ಮಾಡಿರುವ ಘಟನೆ ಆನೇಕಲ್‌ ತಾಲೂಕಿನ ನಡೆದಿದೆ.

ಹೊಸೂರು ಮೂಲದ ಪವಿತ್ರಾ ಎಂಬಾಕೆಯಿಂದ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್‌ ಮಾಡಿಕೊಂಡು 14 ಮಂದಿ ವಂಚಕರು ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಟ್ರಸ್ಟ್​ಗೆ RBIನಿಂದ 17 ಕೋಟಿ ಬಂದಿರೋದಾಗಿ ಹೇಳಿ ಗ್ರಾಹಕರಿಗೆ ಮೋಸ ಮಾಡಿದ್ದಾರೆ. ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ 5 ಲಕ್ಷ ರೂಪಾಯಿ ಸಬ್ಸಿಡಿ ಎಂದು ಹೇಳಿ ಜನರನ್ನು ನಂಬಿಸಿದ್ದ ವಂಚಕಿ, ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ವಂಚನೆ ಮಾಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಹೆಸರು ಹಾಗೂ ಆರ್​​ಬಿಐ ಹೆಸರು ಹೇಳಿಕೊಂಡು ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಎಂಬ ಮಹಿಳೆ ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಹೆಸರಿನಲ್ಲಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಜನರನ್ನು ನಂಬಿಸಲು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಸಹಿ ಇರುವ ನಕಲಿ ಕಾಪಿ ತೋರಿಸಿದ್ದು, ನೂರಾರು ಮಂದಿ ಅಮಾಯಕ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರಂತೆ. ಅಲ್ಲದೇ, ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರಿಗೆ ನಂಬಿಸಿದ್ದು, ಇದನ್ನು ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಹಣ ನೀಡುತ್ತಾ ಬಂದಿದ್ದರಂತೆ. ಆದರೆ ತಿಂಗಳುಗಳು ಕಳೆದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದ್ದು, ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ.

ಘಟನೆ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲು ಮಾಡಲಾಗಿದೆ. ಪವಿತ್ರಾ ಸೇರಿದಂತೆ ಆಕೆಯೊಂದಿಗೆ ಇದ್ದ ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ಎಂಬವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Back to top button