Gold Silver Price on 26 December: ಬೆಳ್ಳಿಯಲ್ಲಿ ಏರಿಕೆ; ಕ್ರಿಸ್ಮಸ್ ಹಬ್ಬದ ಬಳಿಕ ಇವತ್ತಿನ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ, ಇಲ್ಲಿದೆ ಪಟ್ಟಿ

WhatsApp Group Join Now
Telegram Group Join Now
Bullion Market 2023, December 26th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,490 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,675 ರೂ ಇದೆ.
ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

ಬೆಂಗಳೂರು, ಡಿಸೆಂಬರ್ 26: ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ (Gold and silver Rates) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ತುಸು ದುಬಾರಿ ಆಗಿದೆ. ಇವತ್ತು ಅಂತಾರಾಷ್ಟ್ರೀಯ ಚಿನಿವಾರ ಪೇಟೆಯಲ್ಲಿ ಒಂದಷ್ಟು ವ್ಯತ್ಯಯವಾಗುವ ನಿರೀಕ್ಷೆ ಇದ್ದು, ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗುವ ಸಾಧ್ಯತೆ ಕಾಣುತ್ತಿದೆ. ಬೆಳ್ಳಿ ಗ್ರಾಮ್​ಗೆ 20 ಪೈಸೆಯಷ್ಟು ಮಾತ್ರವೇ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,675 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 792 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 767.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,200 ರೂ
  • ಚೆನ್ನೈ: 58,800 ರೂ
  • ಮುಂಬೈ: 58,200 ರೂ
  • ದೆಹಲಿ: 58,350 ರೂ
  • ಕೋಲ್ಕತಾ: 58,200 ರೂ
  • ಕೇರಳ: 58,200 ರೂ
  • ಅಹ್ಮದಾಬಾದ್: 58,250 ರೂ
  • ಜೈಪುರ್: 58,350 ರೂ
  • ಲಕ್ನೋ: 58,350 ರೂ
  • ಭುವನೇಶ್ವರ್: 58,200 ರೂ

 

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,427 ರುಪಾಯಿ)
  • ದುಬೈ: 2,302.50 ಡಿರಾಮ್ (52,132 ರುಪಾಯಿ)
  • ಅಮೆರಿಕ: 630 ಡಾಲರ್ (52,399 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,060 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,996 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,531 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,990 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,304 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,675 ರೂ
  • ಚೆನ್ನೈ: 8,070 ರೂ
  • ಮುಂಬೈ: 7,920 ರೂ
  • ದೆಹಲಿ: 7,920 ರೂ
  • ಕೋಲ್ಕತಾ: 7,920 ರೂ
  • ಕೇರಳ: 8,070 ರೂ
  • ಅಹ್ಮದಾಬಾದ್: 7,920 ರೂ
  • ಜೈಪುರ್: 7,920 ರೂ
  • ಲಕ್ನೋ: 7,920 ರೂ
  • ಭುವನೇಶ್ವರ್: 8,070 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

WhatsApp Group Join Now
Telegram Group Join Now
Back to top button