ʻಗೃಹಜ್ಯೋತಿ ಯೋಜನೆʼ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ : ಸಿಗಲಿದೆ ಇನ್ನಷ್ಟು ಲಾಭಗಳು!

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿಯು ಒಂದು. ಈ ಯೋಜನೆಯನ್ವಯ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಗೃಹಜ್ಯೋತಿ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ.

ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಮಾಸಿಕ ಅರ್ಹ 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇ.

10 ರಷ್ಟು ಹೆಚ್ಚುವರಿ ವಿದ್ಯುತ್‌ಗೆ ಬದಲಾಗಿ 10 ಯೂನಿಟ್ ಹೆಚ್ಚುವರಿ ಉಚಿತ ವಿದ್ಯುತ್ ನೀಡಲಿದೆ.

ಸರಾಸರಿ 48 ಯೂನಿಟ್ ಗಿಂತ ಕಡಿಮೆ ಬಳಸುವ ಸುಮಾರು 70 ಲಕ್ಷ ಗ್ರಾಹಕರಿಗೆ ಇದರಿಂದ ಪ್ರಯೋಜನ ಸಿಗಲಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಅತ್ಯಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಇನ್ನು ಮುಂದೆ ಸಂಪೂರ್ಣ ಶೂನ್ಯ ಬಿಲ್ ಸಿಗಲಿದೆ. ರಾಜ್ಯ ಸರ್ಕಾರ ಇದಕ್ಕೆ ವಾರ್ಷಿಕ 398 ಕೋಟಿ ರೂ.ಗಳ ಹೆಚ್ಚುವರಿ ಸಹಾಯಧನ ನೀಡಲಿದೆ.

ಗೃಹಜ್ಯೋತಿ ಯೋಜನೆ

ಈವರೆಗೆನೋಂದಣಿಗೊಂಡ ಒಟ್ಟು ಗ್ರಾಹಕರ ಸಂಖ್ಯೆ 1.66

ಫಲಾನುಭವಿಗಳ ಒಟ್ಟು ಸಂಖ್ಯೆ 1.60 ಕೋಟಿ

ಒಟ್ಟು ಸಬ್ಸಿಡಿ ಮೊತ್ತ 3,644 ಕೋಟಿ

97% ಫಲಾನುಭವಿಗಳು ಕರ್ನಾಟಕದಾದ್ಯಂತ

ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಇರುವುದಿಲ್ಲ.

WhatsApp Group Join Now
Telegram Group Join Now
Back to top button