ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಚಿತ್ರದುರ್ಗ : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ.
ಶೀಘ್ರವೇ ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.
ಕೋಟೆ ನಗರಿ ಚಿತ್ರದುರ್ಗಕ್ಕೆ ಭೇಟಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಐತಿಹಾಸಿಕ, ಕೋಟೆ ನಗರಿ ಚಿತ್ರದುರ್ಗಕ್ಕೆ ಭೇಟಿ ನೀಡಿದ ವೇಳೆ ನಾಡಿನ ವೀರ ವನಿತೆ ಒನಕೆ ಓಬವ್ವನ ಪ್ರತಿಮೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪಕ್ಷದ ಕಾರ್ಯಕರ್ತರ ಜಯಘೋಷದ ನಡುವೆ ಬೃಹತ್ ಸೇಬಿನ ಹಾರ ಹಾಕುವ ಮಾಡುವ ಮೂಲಕ ಅತ್ಯಂತ ಗೌರವದಿಂದ ಸನ್ಮಾನಿದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಮುಖಂಡರು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು.
ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.