Gruhalakshmi Scheme: ಇನ್ಮುಂದೆ ಯಾರಿಗೆಲ್ಲಾ ಗೃಹಲಕ್ಷ್ಮಿ ಹಣ ಮಿಸ್ ಆಗಲಿದೆ?, ಈ ಮೂಲಕ ಕೆಲವು ಮಹಿಳೆಯರಿಗೆ ಬಿಗ್ ಶಾಕ್ ಮಾಹಿತಿ, ವಿವರ
Gruhalakshmi Scheme: ಕಾಂಗ್ರೆಸ್‌ನ ಸರ್ಕಾರದ ಪ್ರಮುಖ 5 ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಒಂದಾಗಿದೆ. ಈ ಯೋಜನೆಯಡಿ ಇಷ್ಟು ದಿನ ಪ್ರತಿ ಮನೆ ಯಜಮಾನಿಗೂ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡಲಾಗುತ್ತಿತ್ತು. ಆದರೆ ಇದೀಗ ಕೊಂಚ ಬದಲಾವಣೆ ತರಲು ಸರ್ಕಾರ ಮುಂದಾಗಿದ್ದು, ಈ ಮೂಲಕ ಕೆಲವು ಮಹಿಳೆಯರಿಗೆ ಬಿಗ್ ಶಾಕ್ ನೀಡಲಿದೆ.
ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮೆ ಆಗುತ್ತಿದೆ. ಆದರೆ ಇದೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾಗಿದ್ದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ. ಯಾಕೆಂದರೆ ಕೆಲವರನ್ನು ಈ ಯೋಜನೆಯಿಂದ ಹೊರಗಿಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಮಾರ್ಚ್ ನಂತರ ಹೊಸದಾಗಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನೂ ಪರಿಗಣಿಸಲು ಸರ್ಜಾರ ನಿರ್ಧಾರ ಮಾಡಿದ್ದು, ಈ ನಡುವೆ ಕೆಲವು ಯಜಮಾನಿಯರಿಗೆ ಶಾಕ್ ಕೊಡಲು ಸರ್ಕಾರ ಮುಂದಾಗಿದೆ.
ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ. ಆದರೂ, ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಇಂತಹ 1.78 ಲಕ್ಷ ಮಂದಿಯನ್ನು ಪತ್ತೆ ಮಾಡಲಾಗಿದೆ.
ಹೀಗೆ ಪತ್ತೆಯಾದವರಲ್ಲಿ ಆದಾಯ ತೆರಿಗೆ ಪಾವತಿಸದ ಬಗ್ಗೆ ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6,000ಕ್ಕೂ ಹೆಚ್ಚು ಜನ ದೃಢೀಕರಣ ಪತ್ರ ಸಲ್ಲಿಕೆ ಮಾಡಿದ್ದಾರೆ. ಇದೀಗ ಇವರನ್ನು ಯೋಜನೆಗೆ ಪರಿಗಣನೆ ಮಾಡಲಾಗುವುದು. ದೃಢೀಕರಣ ಪತ್ರ ಸಲ್ಲಿಕೆ ಮಾಡಿದವರಿಗೆ 2,000 ರೂಪಾಯಿ ನೀಡಲಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ಗೃಹಕ್ಷ್ಮಿ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆ ಆಗಿವೆ. ಯೋಜನೆಗೆ ಬಿಪಿಎಲ್, ಎಪಿಎಲ್ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಮೆ ಮಾಡಲಾಗುತ್ತದೆ.