ʻಯುವನಿಧಿ ಯೋಜನೆʼ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

WhatsApp Group Join Now
Telegram Group Join Now

ಬೆಂಗಳೂರು : ಯುವನಿಧಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರವನ್ನು ಅಪ್‌ ಲೋಡ್‌ ಮಾಡಬೇಕು ಎಂದು ತಿಳಿಸಿದೆ.

 

ಈ ಕುರಿತು ಕೌಶಲಾಭಿವೃದ್ಧಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಮಾಹಿತಿ ನೀಡಿದ್ದು, ನ್ಯಾಡ್‌ (ನ್ಯಾಷನಲ್‌ ಅಕಾಡೆಮಿ ಡಿಪಾಸಿಟರಿ)ನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣಪತ್ರಗಳಿವೆ.

 

ಅಲ್ಲಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ದಾಖಲೆಗಳು ಹೊಂದಾಣಿಕೆಯಾಗಿ ಫಲಿತಾಂಶ ಬಂದು ಆರು ತಿಂಗಳಾಗಿರುವ ಅಭ್ಯರ್ಥಿಗಳಿಗೆ ಹಣ ವರ್ಗಾವಣೆಯಾಗುತ್ತಿದೆ. ಪ್ರತಿ ತಿಂಗಳು ಅಭ್ಯರ್ಥಿಗಳು ಕೆಲಸ ಸಿಕ್ಕಿಲ್ಲ ಹಾಗೂ ಉನ್ನತ ಶಿಕ್ಷಣಕ್ಕೆ ಹೋಗಿಲ್ಲವೆಂದು ಸ್ವಯಂಘೋಷಿತ ಪ್ರಮಾಣ ಪತ್ರವನ್ನು ಅಪ್‌ಲೋಡ್‌ ಮಾಡಬೇಕು ಎಂದು ತಿಳಿಸಿದ್ದಾರೆ.

 

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಚಾಲನೆ ನೀಡಲಾಗಿದೆ.

 

2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ https://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

WhatsApp Group Join Now
Telegram Group Join Now
Back to top button