ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

WhatsApp Group Join Now
Telegram Group Join Now

ಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ.

ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.

 

ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದರು.

ಬೈಕ್ ನಲ್ಲಿದ್ದ ಸಹಸವಾರ ತೀವ್ರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Group Join Now
Telegram Group Join Now
Back to top button