‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 67,951 ಅರ್ಜಿ ಸಲ್ಲಿಕೆ
ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ರಾಜ್ಯಾದ್ಯಂತ ಈಗಾಗಲೇ 67,951 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು 7,453 ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ 2023ರ ಎಲ್ಲ ಪದವೀಧರರಿಗೆ ಹಾಗೂ ಡಿಪ್ಲೋಮಾ ಪದವೀಧರರಿಗೆ ತಲುಪಿಸಿ.
ಉತ್ತಮ ನಾಳೆಗಳನ್ನು ಕಟ್ಟಿಕೊಳ್ಳಲು ಯುವಜನತೆಗೆ ನೆರವಾಗಲಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯುವನಿಧಿ ಯೋಜನೆ ಇಂದು ಜಾರಿಗೊಂಡಿದೆ, 2023ರಲ್ಲಿ ಪದವಿ ಹಾಗೂ ಡಿಪ್ಲೊಮಾ ಪಾಸಾದ ನೊಂದಾಯಿತ ನಿರುದ್ಯೋಗಿ ಯುವಜನರ ಖಾತೆಗೆ ಮಾಸಿಕ ನಿರುದ್ಯೋಗ ಭತ್ಯೆ ಶುಕ್ರವಾರದಿಂದಲೇ ಜಮೆಯಾಗಲಿದೆ.
ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡ ತಗ್ಗಿಸಬೇಕೆಂಬ ಸದುದ್ದೇಶದೊಂದಿಗೆ ಜಾರಿಗೆ ಕೊಟ್ಟಿರುವ ಈ ಯೋಜನೆಯ ಸಂಪೂರ್ಣ ಸದುಪಯೋಗ ಪಡೆಯಿರಿ ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ₹ 3,000, ಡಿಪ್ಲೋಮಾ ಪದವೀಧರರಿಗೆ ₹ 1,500 ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.