ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಿದರೆ ಅಪರಾಧ ನಿಯಂತ್ರಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬಹುದು. ಪೊಲೀಸ್ ಕಮಿಷನರ್ ಇಡಾ ಮಾರ್ಟಿನ್

WhatsApp Group Join Now
Telegram Group Join Now

ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಿದರೆ ಅಪರಾಧ ನಿಯಂತ್ರಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬಹುದು ಎಂದು ನಗರ ನೂತನ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಹೇಳಿದ್ದಾರೆ.

 

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬಾನಿಯಂಗ್ ಬೆಳಗಾವಿಯ ಬಗ್ಗೆ ತಿಳಿದುಕೊಂಡಿದ್ದೇನೆ. ಚಳಿಗಾಲದ ಅಧಿವೇಶನದಲ್ಲಿ ಇಲ್ಲಿ ಕೆಲಸ ಮಾಡಿದ ಅನುಭವ ಇದೆ. ಆಡಳಿತಾತ್ಮಕವಾಗಿ ನಗರ ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ತರಲಾಗುವುದು ಎಂದರು ಟ್ರಾಫಿಕ್ ಸಮಸ್ಯೆ ಹೀಗೆ ಒಬ್ಬೊಬ್ಬರದು ಒಂದೊಂದು ಸಮಸ್ಯೆ ಇರುತ್ತದೆ. ಎಲ್ಲರ ಸಮಸ್ಯೆಯೂ ಮುಖ್ಯ. ಹಾಗಾಗಿ ಸ್ಥಳೀಯವಾಗಿ ಸಭೆ ನಡೆಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತೇವೆ.ಎಂದರು.

 

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಚುರುಕಾಗಿ ಕೆಲಸ ಮಾಡಲು ಪ್ರಯತ್ನಿಸುವೆ ಎಂದು ಹೇಳಿದರು.

ನಿನ್ನೆ ನಾನು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ನಮ್ಮ ಸಿಬ್ಬಂದಿಗಳೊಂದಿಗೆ ಸಭೆ‌ ನಡೆಸಿ ಮಾರ್ಗದರ್ಶನ ಪಡೆದಿದ್ದೇನೆ. ಬೆಳಗಾವಿ ನಗರದಲ್ಲಿ ಡಿಸಿಪಿಗಳಿಬ್ವರೂ ಉತ್ತಮ ಕೆಲಸ ಮಾಡಿದ್ದಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕೇವಲ ನಮ್ಮ ಕಡೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ನಾಗರಿಕರ ಸಹಕಾರ ಪೊಲೀಸರಿಗೆ ಮಾಡಿದರೆ ನಗರವು ಶಾಂತವಾಗಿ ಇಡಲು ಸಾಧ್ಯ ಎಂದರು.

 

ಸಾರ್ವಜನಿಕರ ಸಮಸ್ಯೆಯನ್ನು ಬಗೆ ಹರಿಸಲು ವಿಳಂಬ ಮಾಡಿ ತಪ್ಪು ‌ಮಾಡುವ ಅಧಿಕಾರಿಗಳ ವಿರುದ್ಧ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ಸಂಚಾರ ಸಮಸ್ಯೆಯ ಬಗ್ಗೆಯೂ ಸಂಚಾರ ಡಿಸಿಪಿಯೊಂದಿಗೆ ಸಭೆ ನಡೆಸಿದ್ದೇನೆ ಆದಷ್ಟು ಬೇಗ ಸಮಸ್ಯೆಯನ್ನು ಬಗೆ ಹರಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಡಿಸಿಪಿ ರೋಹನ್ ಜಗದೀಶ್, ಎಸಿಪಿ ಸದಾಶಿವ ಕಟ್ಟಿಮನಿ ಇದ್ದರು

WhatsApp Group Join Now
Telegram Group Join Now
Back to top button