ಯಜಮಾನಿಯರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ನಿಮಗೆ ಬರಲ್ಲ ‘ಗೃಹಲಕ್ಷ್ಮಿ’ ಹಣ.! ಹಣ ಜಮಾ ಆಗದಿದ್ದರೆ ಏನು ಮಾಡಬೇಕು..?

WhatsApp Group Join Now
Telegram Group Join Now

ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಹಣ ಬಂದಿಲ್ಲ.

ಹಣ ಜಮಾ ಆಗದಿದ್ದರೆ ಏನು ಮಾಡಬೇಕು..?

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.

ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಕೆವೈಸಿ ಮಾಡಿಸಬೇಕು. ಅಂದರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ ಆಗ ಹಣ ಜಮೆ ಆಗಲಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ಗೆ ಎಸ್‌ಎಂಎಸ್ ಬರುತ್ತದೆ. ಹಲವು ಬಾರಿ ಎಸ್‌ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.

ಗೃಹ ಲಕ್ಷ್ಮಿ ಯೋಜನೆಯ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗಲ್ಲ. ನಿಮ್ಮ ಹತ್ತಿರದ ಬ್ಯಾಂಕ್ ಗೆ ಭೇಟಿ ನೀಡುವ ಮೂಲಕ NPCI ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ನಂತರ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುತ್ತದೆ.

WhatsApp Group Join Now
Telegram Group Join Now
Back to top button