ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ‘ರಾಜ್ಯ ಬಜೆಟ್’ ಮಂಡನೆ ಆರಂಭ: ‘173 ಪುಟ’ಗಳ ಅಯವ್ಯಯ ಮಂಡನೆ

WhatsApp Group Join Now
Telegram Group Join Now

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಇಂದು ಅವರ ನೇತೃತ್ವದಲ್ಲಿ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆದಿದ್ದಾರೆ. ಈ ಬಳಿಕ ವಿಧಾನಸಭೆಗೆ ತೆರಳಲಿರುವಂತ ಅವರು, 173 ಪುಟಗಳ ಅಯವ್ಯಯವನ್ನು ಮಂಡನೆ ಮಾಡಲಿದ್ದಾರೆ.

 

ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಇಂದು ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಸಲ್ಲಿಸಿ ಅನುಮೋದನೆ ಪಡೆದರು.

ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ಬಳಿಕ ವಿಧಾನಸಭೆಗೆ ತೆರಳಿ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2024-25 ಅನ್ನು ಮಂಡಿಸಲಿದ್ದಾರೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯ ಬಜೆಟ್ ಮಂಡನೆ ಆರಂಭಗೊಳ್ಳಲಿದ್ದು, 173 ಪುಟಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸಲಿರುವಂತ ಅಯವ್ಯಯ ಒಳಗೊಂಡಿದೆ ಎಂಬುದಾಗಿ ತಿಳಿದು ಬಂದಿದೆ.

WhatsApp Group Join Now
Telegram Group Join Now
Back to top button