BJP; ಪ್ರಭಾಕರ ಕೋರೆ ಭೇಟಿಯಾದ ಜಗದೀಶ್ ಶೆಟ್ಟರ್

WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ರವಿವಾರ ಪ್ರಭಾವಿ ನಾಯಕ ಹಾಗೂ ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಟಿಕೆಟ್ ಹಂಚಿಕೆ ಸಮಯದಲ್ಲಿ ಪ್ರಭಾಕರ ಕೋರೆ ಮುನಿಸಿಕೊಂಡಿದ್ದರು ಎಂಬ ಹಿನ್ನೆಲೆಯಲ್ಲಿ ಇಂದಿನ ಜಗದೀಶ್ ಶೆಟ್ಟರ್ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.

ಕೋರೆ ಅವರ ನಿವಾಸದಲ್ಲಿ ಇಬ್ಬರೂ ನಾಯಕರು ಚುನಾವಣೆ ರಣತಂತ್ರ,ಪ್ರಚಾರ ಕಾರ್ಯ ಹಾಗೂ ವಿರೋಧ ಪಕ್ಷದವರನ್ನು ಎದುರಿಸುವ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಸೇರಿದಂತೆ ಕೆಲವು ಮುಖಂಡರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Back to top button