ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆ

WhatsApp Group Join Now
Telegram Group Join Now

ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನ ಉಳಿದೆಡೆ ಸಾಧಾರಣ ಮಳೆಯಾಗಿದೆ.

ಕಂದಾಯ ಇಲಾಖೆಯಂತೆ ಕಣಕುಂಬಿ ಅರಣ್ಯದಲ್ಲಿ 11.5 ಸೆಂ.ಮೀ, ಲೋಂಡಾ-9 ಸೆಂ.ಮೀ, ಜಾಂಬೋಟಿ ಸುತ್ತಮುತ್ತ 6.2 ಸೆಂ.ಮೀ ಮತ್ತು ಉಳಿದೆಡೆ ಸರಾಸರಿ 5 ಸೆಂ.ಮೀ ಮಳೆ ಸುರಿದಿದೆ.

 

ಪಟ್ಟಣದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ತಾಲ್ಲೂಕಿನ ನಂದಗಡ, ಹಲಸಿ ಭಾಗದಲ್ಲಿ ಸಂಜೆ ತುಂತುರು ಮಳೆಯಾಗಿದೆ.

ಎರಡು ದಿನಗಳಿಂದ ಮಳೆಯ ಅಬ್ಬರ ಕ್ಷೀಣಿಸಿದ್ದು, ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಇತರೆ ಜಲಮೂಲಗಳಲ್ಲೂ ಪ್ರವಾಹದ ಅಬ್ಬರ ತಗ್ಗಿದೆ.

WhatsApp Group Join Now
Telegram Group Join Now
Back to top button