Karnataka Budget 2024: ಫೆಬ್ರವರಿಯಲ್ಲೇ ರಾಜ್ಯ ಬಜೆಟ್‌ ಮಂಡನೆ: ಸಿಎಂ ಸಿದ್ದರಾಮಯ್ಯ

WhatsApp Group Join Now
Telegram Group Join Now

ಬೆಂಗಳೂರು: ಮಾರ್ಚ್‌ ನಲ್ಲಿ ಲೋಕಸಭೆ ಚುನಾವಣೆ (Loksabha Election) ನೀತಿ ಸಂಹಿತೆ (Code of Conduct) ಘೋಷಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯ ಬಜೆಟ್‌‌ (Karnataka Budget) ಅನ್ನು ಫೆಬ್ರವರಿಯಲ್ಲೇ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

 

ಬರ ನಿರ್ವಹಣೆಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿಗಳ ಪರಿಹಾರವನ್ನು ಮಾತ್ರ ನೀಡಿದೆ. ಕೇಂದ್ರ ಸರ್ಕಾರದಿಂದ (Central government) ಆರ್ಥಿಕ ನೆರವು ದೊರೆತ ತಕ್ಷಣ ರೈತರಿಗೆ ನಿಯಮಾನುಸಾರ ಹೆಚ್ಚಿನ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ರಾಜ್ಯ ಸರ್ಕಾರ ನೀಡಿರುವ ಪರಿಹಾರ ಸಾಲುವುದಿಲ್ಲ ಎಂಬುದು ನಮಗೂ ಗೊತ್ತಿದೆ. ಆದರೆ ಕೇಂದ್ರದಿಂದ ಈವರೆಗೂ ಯಾವುದೇ ನೆರವು ಬಂದಿಲ್ಲ ಎಂಬ ವಿಷಯವನ್ನು ತಿಳಿಸಿದರು.

 

ರಾಜ್ಯದ ಬಿಜೆಪಿ ನಾಯಕರು ಇಲ್ಲಿ ಟೀಕೆ ಮಾಡುವ ಬದಲು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

 

BJP ಮನಸ್ತಾಪ ತಣಿಸಲು HDK ಯತ್ನ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ನಡುವೆ ಮುನಿಸು ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಿ ಇಬ್ಬರ ನಡುವಿನ ಮನಸ್ತಾಪವನ್ನು ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ದೂರ ಮಾಡಿದ್ದಾರೆ ಎನ್ನಲಾಗಿದೆ.


ಫೆಬ್ರವರಿಯಲ್ಲಿಯೇ ಬಜೆಟ್ ಮಂಡನೆ (ಸಾಂದರ್ಭಿಕ ಚಿತ್ರ)

ಸೋಮಣ್ಣ ಭೇಟಿ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಜೊತೆ ಮಾತಾಡಿದ್ದು, ಪಕ್ಷ ವಿರೋಧಿ ಕೆಲಸ ಮಾಡಿದವರನ್ನು ದೂರ ಇಡುವಂತೆಯೂ ಸಲಹೆ ನೀಡಿದ್ದಾರೆ. ಪಕ್ಷದಲ್ಲಿ ಸೋಮಣ್ಣರನ್ನು ಗೌರವಯುತವಾಗಿ ನಡೆಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡಲಾಗಿದೆ.

 

ಅನಂತಕುಮಾರ್ ಹೆಗಡೆ ವಿರುದ್ಧ ಅಸಮಾಧಾನ ಸ್ಫೋಟ

ಸಂಸದ ಅನಂತಕುಮಾರ್ ಹೆಗಡೆ ಮೇಲೆ ಸ್ವಪಕ್ಷದಲ್ಲೇ ಅಸಮಾಧಾನ ಸ್ಫೋಟವಾಗಿದೆ. ಸಂಸದ ಅನಂತ್ ಕುಮಾರ್ ಹೆಗಡೆ ಮಾತಿಗೆ ಬಿವೈ ವಿಜಯೇಂದ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಹೆಗಡೆ ಮಾತಿನ ಬಗ್ಗೆ ವರಿಷ್ಠರ ಗಮನಕ್ಕೆ ತರಲು ನಿರ್ಧಾರ ಮಾಡಲಾಗಿದೆ. ಮೊದಲು ಹೆಗಡೆ ಜೊತೆ ಮಾತಾಡಿ ಏನು ಮಾತಾಡದಂತೆ ತಾಕೀತು ಮಾಡುವುದಕ್ಕೂ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಸಿಎಂ ಸಿದ್ದರಾಮಯ್ಯ ವ್ಯೆಯಕ್ತಿಕ ನಿಂದನೆಗಿಳಿದಿರುವುದು ಪಕ್ಷಕ್ಕೆ ಡ್ಯಾಮೇಜ್ ಆಗ್ತಿದೆ ಎಂದು ಹಿರಿಯ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದರು. ಆ ಹೇಳಿಕೆಯನ್ನು ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡಿತ್ತು.

WhatsApp Group Join Now
Telegram Group Join Now
Back to top button