ಕರ್ನಾಟಕ ಸುವರ್ಣ ಸಂಭ್ರಮ: ಜ್ಯೋತಿ ರಥಯಾತ್ರೆಗೆ ಬೆಳಗಾವಿ ನಗರದಲ್ಲಿ ಅದ್ಧೂರಿ ಸ್ವಾಗತ

WhatsApp Group Join Now
Telegram Group Join Now

ಬೆಳಗಾವಿ : ಕರ್ನಾಟಕ ಸಂಭ್ರಮ – 50ರ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಜ್ಯೋತಿ ರಥಯಾತ್ರೆಯನ್ನು ಗುರುವಾರ(ಮಾ.7) ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಬತಮಾಡಿಕೊಳ್ಳಲಾಯಿತು.

ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥಯಾತ್ರೆಯು ಫೆ‌,17 ರಂದು ಅಥಣಿ ಮೂಲಕ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದ್ದು, ಹುಕ್ಕೇರಿ ಮೂಲಕ ಹಾಯ್ದು ಬೆಳಗಾವಿ ನಗರವನ್ನು ಪ್ರವೇಶಿಸಿತು.

ಬೆಳಗಾವಿ(ಉತ್ತರ) ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ಮಹಾಪೌರರಾದ ಸವಿತಾ ನಾಯಿಕ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನ ಮಾಡಿದರು.

ಇದಾದ ನಂತರ ಎಲ್ಲ. ಗಣ್ಯರು ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಕಿತ್ತೂರು ಚೆನ್ನಮ್ಮ ವೃತ್ತದಿಂದ ಆರಂಭಗೊಂಡ ರಥಯಾತ್ರೆಯು ಜಿಲ್ಲಾಧಿಕಾರಿ ಕಚೇರಿ, ಕಾಲೇಜು ರಸ್ತೆಯ ಮಾರ್ಗವಾಗಿ ರಥಯಾತ್ರೆಯು ಖಾನಾಪುರಕ್ಕೆ ತೆರಳಿತು.

ಮಹಾನಗರ ಪಾಲಿಕೆಯ ಆಯುಕ್ತರಾದ ಪಿ.ರನ್.ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ವಾರ್ತಾ ಇಲಾಖೆಯ ಉಪನಿರ್ದೇಶಕರಾದ ಗುರುನಾಥ ಕಡಬೂರ, ತಹಶೀಲ್ದಾರ ಸಿದ್ರಾಯ ಭೋಸಗಿ, ಕನ್ನಡಪರ ಸಂಘಟನೆಗಳ ಮುಖಂಡರಾದ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಕಸ್ತೂರಿ ಬಾಂವಿ, ಭಾರತಿ ಮಠದ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ರಥಯಾತ್ರೆಯ ಸಂಚಾರ ಮಾರ್ಗ:

ಈಗಾಗಲೇ ಅಥಣಿ, ಕಾಗವಾಡ,ನಿಪ್ಪಾಣಿ, ಚಿಕ್ಕೋಡಿ, ಹುಕ್ಕೇರಿ ತಾಲ್ಲೂಕುಗಳಲ್ಲಿ ಸಂಚರಿಸಿದ್ದು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು‌ ಹಾಗೂ ಗಣ್ಯರಿಂದ ಅದ್ಧೂರಿ ಸ್ವಾಗತ ನೀಡಲಾಗಿರುತ್ತದೆ.

ಬೆಳಗಾವಿ ನಗರದಲ್ಲಿ ಸಂಚರಿಸಿದ ಬಳಿಕ ಖಾನಾಪುರ, ಚನ್ನಮ್ಮನ ಕಿತ್ತೂರು, ಬೈಲಹೊಂಗಲ, ಗೋಕಾಕ, ಮೂಡಲಗಿ, ರಾಮದುರ್ಗ ತಾಲ್ಲೂಕುಗಳಲ್ಲಿ ಸಂಚರಿಸಿ ಸವದತ್ತಿ ಮೂಲಕ ಧಾರವಾಡ ಜಿಲ್ಲೆಗೆ ತೆರಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ತಿಳಿಸಿದ್ದಾರೆ

WhatsApp Group Join Now
Telegram Group Join Now
Back to top button