ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ಕಳ್ಳರ ಕೈಚಳಕ; ಲ್ಯಾಪ್ ಟಾಪ್ ಗಳನ್ನೇ ಕದ್ದು ಪರಾರಿಯಾಗಿರುವ ಖದೀಮರು

WhatsApp Group Join Now
Telegram Group Join Now

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹತ್ವದ ದಾಖಲೆಗಳುಳ್ಳ ಲ್ಯಾಪ್ ಟಾಪ್ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಕಚೇರಿಯಲ್ಲಿದ್ದ ನಾಲ್ಕು ಲ್ಯಾಪ್ ಟಾಪ್ ಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ರಜಾ ದಿನಗಳನ್ನೇ ಟಾರ್ಗೆಟ್ ಮಾಡಿರುವ ಖದೀಮರು ತಮ್ಮ ಕೈ ಚಳಕ ತೋರಿದ್ದಾರೆ. ಹಲವು ಮಹತ್ವದ ದಾಖಲೆಗಳುಳ್ಳ ಪಾಲಿಕೆಯ ಲ್ಯಾಪ್ ಟಾಪ್ ಗಳನ್ನೇ ಕದ್ದು ಪರಾರಿಯಾಗಿದ್ದಾರೆ. ಬೆಳಗಾವಿಯ ಬಸವೇಶ್ವರ ವೃತ್ತದಲ್ಲಿರುವ ಪಾಲಿಕೆಯ ದಕ್ಷಿಣ ವಲಯದ ಕಂದಾಯ ಕಚೇರಿಯಲ್ಲಿ ಈ ಘಟನೆ ನಡೆದಿದೆ.

ಕಚೇರಿಯ ಕಿಟಕಿ ಗಾಜು ಒಡೆದು, ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಾಲ್ಕು ಲ್ಯಾಪ್ ಟಾಪ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಆಸ್ತಿ ಮಾಲೀಕತ್ವದ ದಾಖಲಾತಿ, ಗುರುತಿನ ಚೀಟಿ, ತೆರಿಗೆ ಚೀಟಿ, ಕಟ್ಟಡ ಪರವಾನಿಗಿ ಪತ್ರ, 26 ವಾರ್ಡ್ ಗಳ ನಿವಾಸಿಗಳ ದಾಖಲೆಗಳ ಸಂಗ್ರಹವುಳ್ಳ ನಾಲ್ಕು ಲ್ಯಾಪ್ ಟಾಪ್ ಗಳ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್.ಲೋಕೇಶ್, ಲ್ಯಾಪ್ ಟಾಪ್ ಕಳ್ಳತನವಾದ ಬಗ್ಗೆ ಟಿಳಕವಾಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದೇವೆ. ಏನೆಲ್ಲಾ ದಾಖಲೆಗಳು ನಾಪತ್ತೆಯಾಗಿವೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Back to top button