ಮೂರು ಡಿಸಿಎಂ ಚರ್ಚೆ ಹೈಕಮಾಂಡ್ ಅಂಗಳಕ್ಕೆ ಬಂದಿಲ್ಲ: ಖರ್ಗೆ ಸ್ಪಷ್ಟನೆ

WhatsApp Group Join Now
Telegram Group Join Now

ಕಲಬುರಗಿ: ಪ್ರಸ್ತುತ ಭುಗಿಲೆದ್ದ ಮೂರು ಡಿಸಿಎಂಗಳ ಕುರಿತಾದ ಬೇಡಿಕೆಗಳ ಚರ್ಚೆ ಹೈಕಮಾಂಡ್ ಅಂಗಳಕ್ಕೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂ ಚರ್ಚೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೇ ಕೇಳಿ ಎಂದರು.

ರಾಜ್ಯದಲ್ಲಿ ಎದ್ದಿರುವ ಮೂರು ಡಿಸಿಎಂ ಚರ್ಚೆ ಕೇವಲ ಊಹಾಪೋಹ ಅಷ್ಟೇ. ಚುನಾವಣೆಯ ಸಮಯದಲ್ಲಿ ಈ ವಿಚಾರವನ್ನು ತರುವುದು ಅಪ್ರಸ್ತುತ. ಈ ಸಮಯದಲ್ಲಿ ಸರ್ಕಾರ ಸರಿಯಾಗಿ ನಡೆಸಿ ನಾವು ಕೊಟ್ಟಿರುವ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದು ನಮ್ಮ ಮುಖ್ಯ ಗುರಿಯಾಗಿರಬೇಕು ಎಂದು ಹೇಳಿದರು.

ಗ್ಯಾರಂಟಿಗಳ ಅನುಷ್ಠಾನವನ್ನು ಸಿದ್ದರಾಮಯ್ಯ ಸರಿಯಾಗಿ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಗುರಿ ಮುಟ್ಟುವವರೆಗೂ ಇಂತಹ ವಿಚಾರಗಳು ಯಾವುದು ತರಬಾರದು ಎಂದು ಹೇಳುವ ಮೂಲಕ ಮೂರು ಡಿಸಿಎಂ ಸ್ಥಾನಗಳ ವಿಷಯಕ್ಕೆ ಖರ್ಗೆ ತಿಲಾಂಜಲಿ ಇಟ್ಟಿದ್ದಾರೆ.

WhatsApp Group Join Now
Telegram Group Join Now
Back to top button