ಲೋಕಸಭಾ ಚುನಾವಣೆ: ಬಿಜೆಪಿಯಿಂದ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದೆ. ಬಿಜೆಪಿ ಹೈಕಮಾಂಡ್ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರಿಗೆ, 28 ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೂ ಟಿಕೆಟ್ ನೀಡಲಾಗಿಲ್ಲ.
ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ, ಗೃಹ ಸಚಿವ ಅಮಿತ್ ಶಾ ಗಾಂಧಿನಗರದಿಂದ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌ ನಿಂದ ಸ್ಪರ್ಧಿಸಲಿದ್ದಾರೆ.
ಉತ್ತರ ಪ್ರದೇಶದ 51 ಕ್ಷೇತ್ರಗಳು, ಪಶ್ಚಿಮ ಬಂಗಾಳದ 20 ಕ್ಷೇತ್ರಗಳು, ಗುಜರಾತ್ ನ 15, ರಾಜಸ್ಥಾನದ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್ 11, ದೆಹಲಿ 5, ಉತ್ತರಾಖಂಡ್ 3, ಗೋವಾ 1, ತ್ರಿಪುರಾ 1, ಅಂಡಮಾನ್ ನಿಕೋಬಾರ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಲಾಗಿದೆ.
Follow Us