ಲೋಕಸಭೆ ಚುನಾವಣೆ: ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಪ್ರಚಾರಕ್ಕೆ ನಿಯಮಗಳು: ಫೇಸ್‌ಬುಕ್ ಮೂಲಕ ಪ್ರಚಾರಕ್ಕೂ ಅನುಮತಿ ಬೇಕು

WhatsApp Group Join Now
Telegram Group Join Now
ಬೆಂಗಳೂರು, ಮಾರ್ಚ್ 25: ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಚಾರಕ್ಕೆ ಸಹ ನಿಯಮಗಳಿವೆ.
ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ನಡೆಸುವುದು ನಮ್ಮೆಲ್ಲರ ಕರ್ತವ್ಯ.
ಈ ನಿಟ್ಟಿನಲ್ಲಿ ಎಲ್ಲರೂ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುವ ಮೂಲಕ ಚುನಾವಣೆ ಪ್ರಕ್ರಿಯೆ ಯಶಸ್ವಿಗೆ ಶ್ರಮಿಸಬೇಕು ಎಂದು ವಾರ್ತಾ ಇಲಾಖೆ ಉಪ ನಿರ್ದೇಶಕ ಹಾಗೂ ಮಾಧ್ಯಮ ಕಣ್ಗಾವಲು ಘಟಕದ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಹೇಳಿದ್ದಾರೆ.
ಲೋಕಸಭೆ ಚುನಾವಣೆ 2024; ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಪ್ರಚಾರಕ್ಕೆ ನಿಯಮಗಳು: ಅಭ್ಯರ್ಥಿಗಳು ತಮ್ಮ ಸ್ವಂತ ಫೇಸ್‌ಬುಕ್ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಯವರ ಮಾನಹಾನಿ, ನಂಬಿಕೆ, ಗೌರವಕ್ಕೆ ಧಕ್ಕೆ ತರುವಂತಹ ವಿಷಯಗಳನ್ನು ಹಂಚಿಕೊಂಡರೆ ಅಂಥವುಗಳನ್ನು ಗಮನಿಸಿ ಚುನಾವಣಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ: ಡಿಜಿಟಲ್ ವಹಿವಾಟು ನಿಯಮ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಖಾತೆಗಳ ಮೂಲಕ ವೈಯಕ್ತಿಕ ಅನಿಸಿಕೆ, ಅಭಿಪ್ರಾಯವನ್ನು ಹಂಚಿಕೊಳ್ಳಲು ಸಾರ್ವಜನಿಕರು ಹಾಗೂ ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ. ಆದರೆ ಅಭ್ಯರ್ಥಿಗಳು ಏಕಕಾಲದಲ್ಲಿ ಲಕ್ಷಾಂತರ ಜನರನ್ನು ತಲುಪಲು ಫೇಸಬುಕ್ ಮೂಲಕ ಕೈಗೊಳ್ಳುವ ಚುನಾವಣಾ ಪ್ರಚಾರದ ವಿಷಯವಸ್ತುವಿಗೆ ಕಡ್ಡಾಯವಾಗಿ ಪ್ರಮಾಣೀಕರಣ ಪಡೆಯಬೇಕು.ದ್ವೇಷ ಭಾಷಣ, ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲುಚುನಾವಣೆಗೆ ಸಂಬಂಧಿಸಿದಂತೆ ಆಡಿಯೋ-ವಿಷುವಲ್ ಪ್ರಚಾರ ಕೈಗೊಳ್ಳುವುದಕ್ಕಿಂತ ಮೊದಲು ಅಭ್ಯರ್ಥಿಗಳು ಎಂಸಿಎಂಸಿ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯುವುದು ಅಗತ್ಯವಿರುವುದರಿಂದ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ವಿಡಿಯೋಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು.
ಅಭ್ಯರ್ಥಿಗಳ ಚುನಾವಣಾ ಖರ್ಚು-ವೆಚ್ಚಗಳ ಮೇಲೆ ನಿಗಾ ವಹಿಸಲು ಅನುಕೂಲವಾಗುವಂತೆ ಮಾಧ್ಯಮ‌ ಕಣ್ಗಾವಲು ಘಟಕ ಕಾರ್ಯ ನಿರ್ವಹಿಸುತ್ತಿದೆ.ಟಿವಿ, ಕೇಬಲ್ ಟಿವಿ, ಎಲ್‌ಇಡಿ ವಾಹನಗಳ ಮೂಲಕ ಪ್ರಚಾರ, ಆಡಿಯೋ ಪ್ರಚಾರ, ಬಲ್ಕ್ ಎಸ್‌ಎಂಎಸ್, ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರಕ್ಕಾಗಿ ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯಲು ಬರುವ ಅರ್ಜಿಗಳನ್ನು ಪರಿಶೀಲಿಸಿ ಮೇಲಾಧಿಕಾರಿಗಳಿಗೆ ತಿಳಿಸಬೇಕಿದೆ.ಚುನಾವಣಾ ಆಯೋಗ ಚುನಾವಣೆ ದಿನಾಂಕ ನಿಗದಿಪಡಿಸಿ ವೇಳಾಪಟ್ಟಿ ಘೋಷಣೆ ಮಾಡಿದ ತಕ್ಷಣದಿಂದ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.
ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C-Vigil ಕೊಠಡಿಯನ್ನು ಸ್ಥಾಪಿಸಲಾಗಿದೆ.

ಅಲ್ಲದೇ ವಿವಿಧ ತಂಡಗಳು ಸಹ ಕಾರ್ಯ ನಿರ್ವಹಣೆ ಮಾಡುತ್ತಿವೆ.ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಚುನಾವಣಾ ಕರಪತ್ರಗಳು ಮತ್ತು ಪೋಸ್ಟರ್‌ಗಳ ಮುದ್ರಣ ಮತ್ತು ಪ್ರಕಟಣೆಯ ಮೇಲೆ ಅಪಪ್ರಚಾರ, ಸುಳ್ಳು ಮಾಹಿತಿಯನ್ನು ಮುದ್ರಿಸದಂತೆ ಜಿಲ್ಲಾ ಚುನಾವಣಾಧಿಕಾರಿಗಳು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಯಾವುದೇ ರೀತಿಯ ರಾಜಕೀಯ ಮತಪ್ರಚಾರ ಮತ್ತು ಕೋಮುಗಲಭೆ ಸೃಷ್ಟಿಸುವಂತಹ, ದ್ವೇಷ ಭಾವನೆಗಳನ್ನು ಕೆರಳಿಸುವಂತಹ ಬ್ಯಾನರ್‌ಗಳಾಗಲಿ, ಹೋರ್ಡಿಂಗ್‌ಗಳಾಗಲಿ ಮತ್ತು ಕರಪತ್ರಗಳನ್ನಾಗಲಿ ಮುದ್ರಿಸುವಂತಿಲ್ಲ.ಮುದ್ರಿಸಲಾದ ಅಥವಾ ಬಹು-ಗ್ರಾಫ್ ಮಾಡಲಾದ ಪ್ರತಿಯೊಂದು ಚುನಾವಣಾ ಕರಪತ್ರ, ಫಲಕ, ಭಿತ್ತಿಪತ್ರ ಅಥವಾ ಪೋಸ್ಟರ್ ಮುಂಭಾಗದಲ್ಲಿ ಮುದ್ರಕನ ಹೆಸರು ಮತ್ತು ವಿಳಾಸ ಮತ್ತು ಪ್ರಕಾಶಕರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಹೊಂದಿರಬೇಕು. ಮುದ್ರಣದ ಒಂದು ಪ್ರತಿಯನ್ನು ಮತ್ತು ದಾಖಲೆಯ ಒಂದು ಪ್ರತಿಯನ್ನು ಮುದ್ರಿಸಿರುವ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಸಲ್ಲಿಸಬೇಕಿದೆ. G
WhatsApp Group Join Now
Telegram Group Join Now
Back to top button