28 ರಂದು ಪ್ರಧಾನಿ ಮೋದಿ ಬೆಳಗಾವಿ ಆಗಮನ, ಸ್ಥಳ ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

WhatsApp Group Join Now
Telegram Group Join Now

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿ ನಗರಕ್ಕೆ ಆಗಮಿಸುವರು ಎಂದು ತಿಳಿಸಿದರು.

ಬೆಳಗಾವಿ ಲೋಕಸಭಾ ವ್ಯಾಪ್ತಿಯ ಎಲ್ಲ ಕಾರ್ಯಕರ್ತರು ಈ ಬೃಹತ್ ಸಮಾವೇಶದಲ್ಲಿ ಭಾಗಿಯಾಗುವರು. ಪ್ರಧಾನಿ ಮೋದಿ ಅವರೊಂದಿಗೆ ಪಕ್ಷದ ಅಭ್ಯರ್ಥಿಗಳು ವೇದಿಕೆಯನ್ನು ಹಂಚಿಹೊಳ್ಳಲಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಪಕ್ಷದ ಹಲವಾರು ನಾಯಕರು ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣದಿಂದ ನೇರವಾಗಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಗರದ ಶಾಲಿನಿ ಸಿಟಿಯಲ್ಲಿ (ಬಿ.ಎಸ್.ಯಡಿಯೂರಪ್ಪ ಮಾರ್ಗ) ಈ ಸಮಾವೇಶವು ಮುಂ. ೧೦ ಗಂಟೆಗೆ ನಡೆಯಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ,ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ, ಲೋಕಸಭಾ ಸಂಚಾಲಕ ಸಂಜಯ ಪಾಟೀಲ, ಜಿಲ್ಲಾ ಅಧ್ಯಕ್ಷ ಸುಭಾಸ ಪಾಟೀಲ, ಜಯ ಪ್ರಕಾಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Back to top button