ಪೀರನವಾಡಿ ದರ್ಗಾಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ: ಪೀರನವಾಡಿ ಹಜರತ್ ಶಾ ಅನ್ಸಾರಿ ಆರ್.ಎಚ್. ದರ್ಗಾಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ ಮುಸ್ಲಿಂ ಸಮಾಜದ ಮುಖಂಡರು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸತೀಶ್ ಶುಗರ್ಸ್ ನಿರ್ದೇಶಕ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಮುಖಂಡರಾದ ರಾಜೇಂದ್ರ ಪಾಟೀಲ್, ಸಿದ್ದಿಕ್ ಅಂಕಲಗಿ, ಬಸವರಾಜ ಶೇಂಗಾವಿ, ಅರ್ಜುನ ನಾಯಕವಾಡಿ , ಸುರೇಶ ಗವನ್ನವರ್, ಆಯಿಷಾ ಸನದಿ ಸೇರಿದಂತೆ ನೂರಾರು ಕಾರ್ಯಕರ್ತರು ಇತರರು ಇದ್ದರು.
Follow Us