ಹುಕ್ಕೇರಿ ಶ್ರೀಗಳ ಆಶೀರ್ವಾದ ಪಡೆದ ​ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್

WhatsApp Group Join Now
Telegram Group Join Now

ಬೆಳಗಾವಿ​ – ಕಾಂಗ್ರೆಸ್ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಬೆಳಗಾವಿ ಹುಕ್ಕೇರಿ ಹಿರೇಮಠದ ಶಾಖೆಗೆ​ ಭೇಟಿ ನೀಡಿ  ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀ​ಜಿ ಅವರನ್ನು ಗೌರವಿಸಿ​, ಆಶೀರ್ವಾದ ‌ಪಡೆದರು.

 

ಈ ಸಂದರ್ಭದಲ್ಲಿ ​ಮಾತನಾಡಿದ ಮೃಣಾಲ್‌ ಹೆಬ್ಬಾಳ್ಕರ್, ​ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತಿದ್ದೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ, ನಮ್ಮ ತಾಯಿಯಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು​ ಹಾಗೂ ವಿಧಾನಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸಹ ಶ್ರೀಗಳ ಮಾರ್ಗದರ್ಶನದಂತೆ ರಾಜಕೀಯದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ‌. ಅದೇ ರೀತಿ ಶ್ರೀಗಳು ನನಗೂ ಮಾರ್ಗದರ್ಶನ ನೀಡಲಿ ಎಂದು​ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

 

​ಲೋಕಸಭಾ ಚುನಾವಣೆಗೆ ಆಯ್ಕೆ ಮಾಡಿದರೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನಮ್ಮ ಭಾಗದ ಎಲ್ಲ ಶಾಸಕರ ಮಾರ್ಗದರ್ಶನದಲ್ಲಿ ​ ಬೆಳಗಾವಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇನೆ ಎಂದರು.

WhatsApp Group Join Now
Telegram Group Join Now
Back to top button