ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಏಪ್ರಿಲ್ 15ರಂದು ನಾಮಪತ್ರ ಸಲ್ಲಿಕೆ

WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಏಪ್ರಿಲ್ 15ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸುವ ಮೃಣಾಲ ಹೆಬ್ಬಾಳಕರ್, ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.

ಲೋಕೋಪಯೋಗಿ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜೊತೆಗೆ ರಾಜ್ಯದ ಕೆಲವು ನಾಯಕರೂ ಆಗಮಿಸುವ ನಿರೀಕ್ಷೆ ಇದೆ. ಸೋಮವಾರ ನಾಮಪತ್ರ ಸಲ್ಲಿಕೆ ನಂತರ ಎರಡನೇ ಸುತ್ತಿನ ಪ್ರಚಾರ ಕಾರ್ಯವನ್ನು ಆರಂಭಿಸಲಾಗುವುದು.

 

ಪಕ್ಷದ ಸ್ಟಾರ್ ಪ್ರಚಾರಕರು ಸೇರಿದಂತೆ ವಿವಿಧ ಮುಖಂಡರು ಪ್ರಚಾರಕ್ಕೆ ಆಗಮಿಸಲಿದ್ದಾರೆ. ಈ ಬಾರಿ ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Back to top button