Covid 19 ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆಯಿಂದಿದ್ದರೆ ಸಾಕು: C.M. ಮುಖ್ಯಮಂತ್ರಿ ಸಿದ್ದರಾಮಯ್ಯ

WhatsApp Group Join Now
Telegram Group Join Now

ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು.

ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ಐಸಿಯುನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ಐಸಿಯುನಲ್ಲಿದ್ದಾರೆ ಎಂದರು.

ದಿನ‌ 5000 ಟೆಸ್ಟ್ ಗಳು ನಡೆಯುತ್ತವೆ. ಬೆಂಗಳೂರಲ್ಲಿ ಸಾವಿರ ಪರೀಕ್ಷೆ ನಡೆಯುತ್ತಿವೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಇವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಬೇಕು. ತಾಂತ್ರಿಕ ಸಲಹಾ ಸಮಿತಿ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆಯಾಗಬೇಕು. ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು ಎಂದರು.

WhatsApp Group Join Now
Telegram Group Join Now
Back to top button