ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು, ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? ; ನಟ ಕಿಶೋರ್

WhatsApp Group Join Now
Telegram Group Join Now

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ​ನೇಹಾಳನ್ನು ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈ ಪ್ರಕರಣ ಕುರಿತಾಗಿ ಈ ಗಾಗಲೇ ಕೆಲವು ಸ್ಟಾರ್​ ನಟ, ನಟಿಯರು ಆಕ್ರೋಶ ಹೊರ ಹಾಕಿ ನೇಹಾಳ ಸಾವಿಗೆ ನ್ಯಾಯ ಬೇಕು ಎಂದು ಧ್ವನಿ ಎತ್ತಿದ್ದಾರೆ.

ನಟ ಕಿಶೋರ್​ ಸೋಶಿಯಲ್ ಮೀಡಿಯಾದಲ್ಲಿ, ಬಾಳಿ ಬದುಕಬೇಕಾದ ಜೀವ ನೇಹಾಗೆ ನಡೆದದ್ದು, ನಿಜಕ್ಕೂ ಅಕ್ಷಮ್ಯ ಅಪರಾಧ. ಒಂದು ನಾಗರೀಕ ಸಮಾಜವಾಗಿ ಇದು ನಮ್ಮೆಲ್ಲರ ಸೋಲು.. ಈಗಾಗಲೇ ಸಾಕ್ಷಿ ಸಮೇತ ಬಂಧಿತವಾಗಿರುವ ಅಪರಾಧಿಗೆ ಮತ್ಯಾರೂ ಈಥರದ ಕೃತ್ಯವೆಸಗದಂತೆ ತನಿಖೆ ಮತ್ತು ಅತೀ ಕಠಿಣ ಶಿಕ್ಷೆ ಆಗುವುದರ ಜತೆಗೆ ಮಹಿಳೆಯರ ವಿರುದ್ಧ ದಿನೇ ದಿನೇ ಹೆಚ್ಚುತ್ತಿರುವ ಅಪರಾಧಗಳು ಅದರ ಮೂಲ ಕಾರಣಗಳನ್ನು ನಿಯಂತ್ರಿಸಲು ಜಾಗೃತಿ ಹೆಚ್ಚಿಸಲು ನಾವು ಮತ್ತು ಸರ್ಕಾರಗಳು ಸಾಧ್ಯ ಕ್ರಮಗಳೆಲ್ಲವನ್ನೂ ಕೈಗೊಳ್ಳಬೇಕು.

ದುರಂತವೆಂದರೆ ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು. ಆದರೆ ನಮ್ಮ ಕೈಲಿ ಸಾಧ್ಯವಾದದ್ದು ಮತ್ಯಾರೂ ನೇಹಾಳಂತೆ ಬಲಿಯಾಗದಿರುವಂಥ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು. ಆದರೆ ಈ ನೋವಿನ ಕ್ಷಣದಲ್ಲೂ ಅದರಲ್ಲಿ ಹಿಂದೂ ಮುಸ್ಲಿಂ ಮಾಡುವುದು ಎಷ್ಟು ಸರಿ?. ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ??

ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ ಎಷ್ಟು ಕ್ರೈಸ್ತ ಅಪರಾಧಿಗಳು? ಹಾಗೆಂದರೆ ಆ ಧರ್ಮದ ನಾವೆಲ್ಲರೂ ಅಪರಾಧಿಗಳೇ? ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೊನ್ಯವಾಗಿ ಬಾಳುತ್ತಿಲ್ಲ? ಅದಕ್ಕೆ ಆ ಧರ್ಮಗಳೂ ಆದರ ಜನರೂ ಜವಾಬ್ದಾರಿಯೇ ? ಹೇಗೆ ? ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿವುದನ್ನು ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಲೇಬೇಕು. ಅದು ಅವರ ಕರ್ತವ್ಯ.. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ದ್ವೇಷ ಹೆಚ್ಚಿಸಿ ರಾಜಕೀಯ ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ.

WhatsApp Group Join Now
Telegram Group Join Now
Back to top button