ಗಮನಿಸಿ: ‘ಯುವನಿಧಿ’ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ‘ಉಚಿತ’ವಾಗಿ ಕರೆ ಮಾಡಿ, ‘ಸಹಾಯ’ ಪಡೆದುಕೊಳ್ಳಿ

WhatsApp Group Join Now
Telegram Group Join Now

ಬೆಂಗಳೂರು: ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಗೆ ಡಿಸೆಂಬರ್ 26 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ವತಿಯಿಂದ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಡಿಸೆಂಬರ್ 26 ರಿಂದ ಆರಂಭವಾಗಿದೆ.

2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮದಲ್ಲಿ ಉತ್ತೀರ್ಣರಾಗಿ 6 ತಿಂಗಳ ಕಾಲ ಉದ್ಯೋಗ ದೊರಕದ ಯುವಕ-ಯುವತಿಯರಿಗೆ ಗರಿಷ್ಠ 2 ವರ್ಷಗಳ ಅವಧಿಗೆ ಪದವೀಧರರಿಗೆ ಮಾಹೆಯಾನ 3 ಸಾವಿರ ಹಾಗೂ ಡಿಪ್ಲೊಮಾ ಪಡೆದವರಿಗೆ ಮಾಹೆಯಾನ 1,500 ರೂ.ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. 2024 ಜನವರಿ ಮಾಹೆಯಿಂದ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರವಾಗಿ ಡಿಬಿಟಿ ಮುಖಾಂತರ ಖಾತೆಗೆ ಹಣ ಜಮೆ ಮಾಡಲಾಗುವುದು. 2 ವರ್ಷಗಳ ಅವಧಿಯಲ್ಲಿ ಉದ್ಯೋಗ ದೊರೆತರೆ ನಿರುದ್ಯೋಗ ಭತ್ಯೆ ನಿಲ್ಲಿಸಲಾಗುವುದು.

ರಾಜ್ಯದಲ್ಲಿ 5 ಲಕ್ಷ 29 ಸಾವಿರ ಯುವಕ-ಯುವತಿಯರಿದ್ದು, ಇವರಲ್ಲಿ ಪದವಿ ಪಡೆದವರು 4 ಲಕ್ಷ 21 ಸಾವಿರ, ಡಿಪ್ಲೊಮೊ ಪಡೆದವರು 48 ಸಾವಿರ ಇದ್ದು, ಈ ವರ್ಷ ಯುವನಿಧಿಗೆ 250 ಕೋಟಿ ಖರ್ಚಾಗಲಿದೆ. ಸಮಾಜದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಣೆಗೆ ನಿರುದ್ಯೋಗ ಭತ್ಯೆಯ ಜೊತೆಗೆ, ಮಾರುಕಟ್ಟೆಯಲ್ಲಿ ಬೇಡಿಕೆಯಿರುವ ಉದ್ಯೋಗಗÀಳಿಗೆ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಅವಕಾಶ ಕಲ್ಪಿಸುವುದರ ಜೊತೆಗೆ, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೂ ಸಹ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಯುವಜನತೆಯ ಬದುಕಿನಲ್ಲಿ ಬದಲಾವಣೆ ತರಲು ಯುವನಿಧಿ ಯೊಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು.

ಅರ್ಹತೆ: ನೋಂದಣಿ ಮಾಡಲು 2023 ರಲ್ಲಿ ಪದವಿ / ಡಿಪ್ಲೋಮಾ ಉತ್ತೀರ್ಣರಾಗಿರಬೇಕು. ಪದವಿ / ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ / ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವವರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ / ಡಿಪ್ಲೋಮಾದವರೆಗೆ ಅಧ್ಯಯನ ಮಾಡಿರಬೇಕು. ನೋಂದಣಿಗೆ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಹಾಗೂ ಡಿಪ್ಲೋಮಾ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು.

ನೋಂದಣಿ ಪ್ರಕ್ರಿಯೆ: ನೋಂದಣಿಯನ್ನು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಮುಖಾಂತರ ನೋಂದಾಯಿಸಿಕೊಳ್ಳುವುದು. ಮಾಸಿಕವಾಗಿ ನಿರುದ್ಯೋಗ ದೃಢೀಕರಣವು ಕಡ್ಡಾಯ. ತಪ್ಪು ಮಾಹಿತಿ ನೀಡಿದಲ್ಲಿ ದಂಡ ವಿಧಿಸಲಾಗುವುದು.

ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಹ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 599 9918 ಗೆ ಸಂಪರ್ಕಿಸಬಹುದು.

WhatsApp Group Join Now
Telegram Group Join Now
Back to top button